ಹನೂರು: ನಿನ್ನೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಮಾನ್ಯ ಶಾಸಕರು ಎಂ ಆರ್ ಮಂಜುನಾಥ್ ರವರು ಸಚಿವ ಸಂಪುಟದ ಸಿದ್ದತೆಯ ಬಗ್ಗೆ ಸಭೆ ನಡೆಸಲಾಯಿತು.
ಸನ್ಮಾನ್ಯ ಮುಖ್ಯಮಂತ್ರಿಗಳು ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆಯನ್ನು ಆಯೋಜಿಸಿರುವ ಹಿನ್ನೆಲೆಯಲ್ಲಿ ನಿನ್ನೆ ಸಚಿವ ಸಂಪುಟ ನಡೆಯುವ ಸ್ಥಳವನ್ನು ಪರಿಶೀಲನೆ ನಡೆಸಿ ಸಂಬಂಧಿಸಿದ ಅಧಿಕಾರಿಗಳಿಗೆ ಜವಾಬ್ದಾರಿ ನೀಡಿದರು.
ಹಾಗೆಯೇ ಈ ಸಮಯದಲ್ಲಿ ಪ್ರಾಧಿಕಾರ ಅಭಿವೃದ್ಧಿ ಕಾಮಗಾರಿಗಳನ್ನು ವೀಕ್ಷಣೆ ಮಾಡಿ ಕಾಮಗಾರಿಗಳನ್ನು ತ್ವರಿತವಾಗಿ ಮುಗಿಸಬೇಕು ಎಂದು ತಿಳಿಸಿದರು.
ಹಾಗೆಯೇ ಹೆಲಿಪ್ಯಾಡ್ ಸ್ಥಳವನ್ನು ಪರಿಶೀಲನೆ ಮಾಡಿ ಮತ್ತೊಂದು ಹೆಲಿಪ್ಯಾಡ್ ಮಾಡಲು ಸ್ಥಳ ಗುರುತಿಸಿ ಎಂದು ಅಧಿಕಾರಿಗಳಿಗೆ ತಿಳಿಸಿದರು.
ನಂತರ ಅಧಿಕಾರಿಗಳ ಜೊತೆ ಸಭೆಯನ್ನು ನಡೆಸಿ ಸಚಿವ ಸಂಪುಟ ಸಭೆ ನಡೆಸಲು ಅಗತ್ಯ ಕ್ರಮ ಕೈಗೊಂಡು ಯಾವುದೇ ಲೋಪವಾಗದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಪ್ರಾಧಿಕಾರದ ಕಾರ್ಯದರ್ಶಿ ರಘು,ಉಪವಿಭಾಗಾಧಿಕಾರಿ, ಮಹೇಶ್, ಡಿವೈಎಸ್ಪಿ ಧರ್ಮೇಂದ್ರ, ಹನೂರು ತಹಶೀಲ್ದಾರ್ ಗುರುಪ್ರಸಾದ್, ತಾಲ್ಲೂಕು ಪಂಚಾಯಿತಿ ಇ. ಒ ಉಮೇಶ್, ಉಪಸ್ಥಿತರಿದ್ದರು.
ವರದಿ ಉಸ್ಮಾನ್ ಖಾನ್
