ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ

ಕೊಪ್ಪಳ/ಕುಷ್ಟಗಿ: ಈಗಾಗಲೇ ತೀರ್ಮಾನ ಮಾಡಿದಂತೆ ತಾಲೂಕಿನ ಹೂಲಗೇರಾ ಗ್ರಾಮದಲ್ಲಿ ಫೆ.15ರಂದು ನಡೆಯುವ 13ನೇಯ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಾಡಲು ನಿರ್ಧರಿಸಲಾಯಿತು. ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯರು,ಸಾಹಿತಿಗಳು ಕನ್ನಡ ಪರ ಸಂಘಟನೆಯ ಪದಾಧಿಕಾರಿಗಳು ಎಲ್ಲರೂ ಸಮ್ಮೇಳನದ ಯಶಸ್ವಿಗೆ ಸಹಕಾರವನ್ನು ನೀಡುವ ಮೂಲಕ ಅಕ್ಷರ ಜಾತ್ರೆಗೆ ಮೆರುಗು ನೀಡಬೇಕೆಂದು ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷರಾದ ಶಾಸಕರು, ವಿರೋಧ ಪಕ್ಷದ ಮುಖ್ಯ ಸಚೇತಕರು ದೊಡ್ಡನಗೌಡ ಪಾಟೀಲ ಅವರು ಅಭಿಪ್ರಾಯಪಟ್ಟರು.
ಪಟ್ಟಣದ ಶಾಸಕರ ಕಾರ್ಯಾಲಯದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ನಡೆದ ಸಮ್ಮೇಳನದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿ ಸಮ್ಮೇಳನದಲ್ಲಿ ಉತ್ತಮವಾದ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವ ಮೂಲಕ ಸಮ್ಮೇಳನದ ಅಭೂತಪೂರ್ವ
ಯಶಸ್ಸಿಗೆ ಮುಂದಾಗಬೇಕು ಇದಕ್ಕೆ ಬೇಕಾದ ಸಹಾಯ ಮತ್ತು ಸಹಕಾರ ನೀಡಲಾಗುವದು ತಾಲ್ಲೂಕಿನ ಎಲ್ಲಾ ಹಿರಿಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಈ ಭಾಗದ ನೀರಾವರಿ ಸೇರಿದಂತೆ ವಿಶೇಷ ವಿಷಯಗಳ ಕುರಿತು ಗೋಷ್ಟಿ ಏರ್ಪಡಿಸಿ ಎಂದು ಕರೆ ನೀಡಿದರು.
ನಿಕಟಪೂರ್ವ ಜಿಲ್ಲಾ ಕ.ಸಾ.ಪ ಕಾರ್ಯದರ್ಶಿ ರವೀಂದ್ರ ಬಾಕಳೆ ಮಾತನಾಡಿ ಕುಷ್ಟಗಿ ತಾಲೂಕಿನ ಹೂಲಗೇರಾ ಗ್ರಾಮದಲ್ಲಿ 13 ನೇಯ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನವು ಫೆ. 15 ರಂದು ಮಾಡಲು ನಿರ್ಧರಿಸಲಾಗಿದೆ. ಜನವರಿ 3 ನೇಯ ತಾರೀಖಿನಂದು ಸಮ್ಮೇಳನದ ಲಾಂಛನವನ್ನು ಸ್ವಾಗತ ಸಮಿತಿ ಅಧ್ಯಕ್ಷ ದೊಡ್ಡನಗೌಡ ಪಾಟೀಲ್ ಅವರಿಂದ ಹೂಲಗೇರಿ ಗ್ರಾಮದ ಮುಖಂಡರ ನೇತೃತ್ವದಲ್ಲಿ ಬಿಡುಗಡೆ ಮಾಡಲಾಗುತ್ತದೆ ಅಂದು ನಡೆಯುವ ತಾಲೂಕು ಕ.ಸಾ.ಪ ಪದಾಧಿಕಾರಿಗಳು ಹಾಗೂ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಸಮ್ಮೇಳನಾಧ್ಯಕ್ಷರ ಆಯ್ಕೆ ಹಾಗೂ ಘೋಷಣೆಯನ್ನು ಮಾಡಲಾಗುತ್ತದೆ ಎಂದರು.
ಕಸಾಪ ತಾಲೂಕಾಧ್ಯಕ್ಷ ಲೆಂಕಪ್ಪ ವಾಲಿಕಾರ ಸಮ್ಮೇಳನದ ಯಶಸ್ವಿಗೆ ಹೂಲಗೇರಿ ಗ್ರಾಮದ ಹಿರಿಯ ಮುಖಂಡರು ಎಲ್ಲಾ ರೀತಿಯ ಸಹಕಾರ ನೀಡುವ ಭರವಸೆ ವ್ಯಕ್ತ ಪಡಿಸಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಕಸಾಪ ಕೇಂದ್ರ ಸಂಘ ಸಂಸ್ಥೆ ಪ್ರತಿನಿಧಿ ನಬಿಸಾಬ ಕುಷ್ಟಗಿ, ಮಾಜಿ ಜಿಪಂ ಸದಸ್ಯ ಕೆ ಮಹೇಶ, ಗೌರವ ಕಾರ್ಯದರ್ಶಿ ಶರಣಪ್ಪ ಲೈನದ, ಶಶಿಧರ ಕವಲಿ, ಶ್ರೀನಿವಾಸ ಕಂಟ್ಲಿ, ಪರಶಿವಮೂರ್ತಿ ಮಾಟಲದಿನ್ನಿ, ಶ್ರೀಕಾಂತ ಸರಗಣಾಚಾರಿ, ಸಂಗಮೇಶ ಲೂತಿಮಠ, ದೊಡ್ಡಪ್ಪ ಕೈಲವಾಡಗಿ, ನಾಗರಾಜ ಬಡಿಗೇರ, ಶುಖಮುನಿ ಗುರುವಿನ, ಶರಣಪ್ಪ ಸೇರಿದಂತೆ ಅನೇಕರು ಈ ಸಭೆಯಲ್ಲಿ ಉಪಸ್ಥಿತರಿದ್ದು ಸಮ್ಮೇಳನದ ಆಯೋಜನೆ ಕುರಿತು ಸಲಹೆ ಸೂಚನೆಗಳನ್ನು ನೀಡಿದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ