ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿ ಮೂಡಿಸಿದ ದಿಟ್ಟ ಮಹಿಳೆ ಸಾವಿತ್ರಿಬಾಯಿಯವರ ಕೊಡುಗೆ ಅಪಾರ : ಕೆರಿಬಸಪ್ಪ ನಿಡಗುಂದಿ ಅಭಿಮತ
ಕೊಪ್ಪಳ/ ಯಲಬುರ್ಗಾ :ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ದೇಶದ ಮೊದಲ ಶಿಕ್ಷಕಿ ಸಾವಿತ್ರಿಬಾಯಿ ಜಯಂತಿ ನಿಮಿತ್ಯ ಭಾವಚಿತ್ರಕ್ಕೆ ವಿಶೇಷ ಪೂಜೆಯನ್ನು ಸಲ್ಲಿಸಲಾಯಿತು.
ಬ್ಲಾಕ್ ಕಾಂಗ್ರೆಸ್ ಕಾರ್ಯಾಧ್ಯಕ್ಷ ಕೆರಿಬಸಪ್ಪ ನಿಡಗುಂದಿ ಮಾತನಾಡಿ ಅವರು ದೇಶದಲ್ಲಿ ಶಿಕ್ಷಣದ ಕ್ರಾಂತಿಯನ್ನೇ ಮೂಡಿಸಿದ ವೀರ ಮಹಿಳೆ ಸಾವಿತ್ರಿಬಾಯಿ ಫುಲೆ ಅವರ ಕೊಡುಗೆ ಅಪಾರವಾಗಿದೆ. ದೇಶದ ಮೊದಲ ಶಿಕ್ಷಕಿಯಾಗಿ ಅಕ್ಷರದ ಅರಿವನ್ನು ಮೂಡಿಸಿದ ಮಹಾನ್ ತಾಯಿ ಅವರ ತತ್ವ ಆದರ್ಶವನ್ನು ನಾವೆಲ್ಲರೂ ಅಳವಡಿಸಿಕೊಳ್ಳಬೇಕು ದೇಶದ ಪ್ರತಿಯೊಬ್ಬರಿಗೂ ಅಕ್ಷರ ಕಲಿಸುವ ಕೆಲಸವನ್ನು ಮಾಡುವ ಮೂಲಕ ಶಿಕ್ಷಣದ ಮಹತ್ವವನ್ನು ಸಾರಿದ್ದಾರೆ. ಇಂತಹ ಶ್ರೇಷ್ಠ ಚಿಂತನೆಗಳ ವಿಚಾರಗಳನ್ನು ಪಾಲಿಸಬೇಕೆಂದು ಹೇಳಿದರು.
ಈ ವೇಳೆಯಲ್ಲಿ ಕಾಂಗ್ರೆಸ್ ಕಾರ್ಯಾಧ್ಯಕ್ಷ ಡಾ. ಶಿವನಗೌಡ ದಾನರೆಡ್ಡಿ, ವಕ್ತಾರ ಆನಂದ್ ಉಳ್ಳಾಗಡ್ಡಿ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಈರಣ್ಣ ಕುಡುಗುಂಟಿ, ಭೂ ನ್ಯಾಯ ಮಂಡಳಿಯ ಸದಸ್ಯ ಮಲ್ಲಿಕಾರ್ಜುನ್ ಜಕ್ಕಲಿ, ಮುಖಂಡರಾದ ಸಿದ್ದು ಪೋಲಿಸ್ ಪಾಟೀಲ್, ಶರಣ ಗೌಡ ಬಸಾಪುರ್, ಹಂಪಯ್ಯ ಸ್ವಾಮಿ ಹಿರೇಮಠ್, ಪುನೀತ್ ಕೊಪ್ಪಳ, ನಿಂಗಪ್ಪ ಕಮತರ, ನಾಗರಾಜ್ ತಲ್ಲೂರ್, ಸಂಗಮೇಶ್ ಚಿಕ್ಕಮ್ಯಾಗೇರಿ, ಸುರೇಶ್ ಧನಕಾಯಿ ಇನ್ನಿತರರು ಉಪಸ್ಥಿತರಿದ್ದರು.
ವರದಿ : ಬಸವರಾಜ ಕೆ ಕಳಸಪ್ಪನವರ
