ಬಾಗಲಕೋಟೆ ಜಿಲ್ಲೆಯ ಬನಹಟ್ಟಿಯ ಸದಾಶಿವ ನಗರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ, ಸಾಹಿತಿಗಳಾದ ಶ್ರೀ ಚಿರಂಜೀವಿ ರೋಡಕರ್ ಅವರನ್ನು ದಲಿತ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷರಾದ ಡಾ. ಅರ್ಜುನ ಗೋಳಸಂಗಿ ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಸುಭಾಷ ಹೊದ್ಲೂರ ಅವರ ಸೂಚನೆ ಮೇರೆಗೆ ದಲಿತ ಸಾಹಿತ್ಯ ಪರಿಷತ್ ಬಾಗಲಕೋಟೆ ಘಟಕದ ಜಿಲ್ಲಾ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ ಎಂದು ದಲಿತ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಡಾ. ತಿಪ್ಪರಾಜ ಸನಗಿನ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
