ಗುಂಡ್ಲುಪೇಟೆ: ಕರ್ನಾಟಕ ಕಾವಲು ಪಡೆಯ ವತಿಯಿಂದ ದಿನಾಂಕ 03/01/2025ರಂದು ಸಾವಿತ್ರಿ ಬಾಯಿಫುಲೆ ರವರ 194ನೇ ಜನ್ಮದಿನಾಚರಣೆ ಸ್ಮರಣೆ ಅಂಗವಾಗಿ ಗುಂಡ್ಲುಪೇಟೆ ಪಟ್ಟಣದ ಬಿ.ಇ.ಓ.ಕಛೇರಿಯ ಮುಂಭಾಗದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮುಖಾಂತರ ಗೌರವ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಕಾವಲು ಪಡೆಯ ತಾಲ್ಲೂಕು ಅಧ್ಯಕ್ಷರಾದ ಎ.ಅಬ್ದುಲ್ ಮಾಲಿಕ್ ಮಾತನಾಡಿ ಸಾವಿತ್ರಿ ಬಾಯಿಫುಲೆ ರವರ ಸಾಧನೆಯನ್ನು ಮೆಲುಕು ಹಾಕಿದರು ಕಾರ್ಯಕ್ರಮದ ನಿರೂಪಣೆಯನ್ನು ತಾಲ್ಲೂಕು ಕಾರ್ಯದರ್ಶಿಗಳಾದ ಎಸ್.ಮುಬಾರಕ್ ನೆರವೇರಿಸಿದರು.
ಇದೇ ವೇಳೆ ತಾಲ್ಲೂಕು ಗೌರವಾಧ್ಯಕ್ಷರಾದ ರಾಮೇಗೌಡ ಟೌನ್ ಉಪಾಧ್ಯಕ್ಷರಾದ ಸಾಧಿಕ್ ಪಾಷಾ, ಟೌನ್ ಸಂಚಾಲಕರಾದ ಮಿಮಿಕ್ರಿರಾಜು, ಮಾದೇವಪ್ಪ,ನಾಗಣ್ಣ ಸೇರಿದಂತೆ ಸಾರ್ವಜನಿಕರು ಹಾಜರಿದ್ದರು.
ವರದಿ ಗುಂಡ್ಲುಪೇಟೆ ಕುಮಾರ್
