ಬೆಂಗಳೂರು : ಎಳ್ಳುಕುಂಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಗ್ರಂಥಾಲಯಕ್ಕೆ ಬೆಂಗಳೂರಿನ ಬ್ಯಾಂಕರ್ಸ್ ಕನ್ನಡಿಗರ ಬಳಗದ ವತಿಯಿಂದ ಕನ್ನಡ ಪುಸ್ತಕಗಳನ್ನು ಉಡುಗೊರೆಯಾಗಿ ನೀಡಲಾಯಿತು.
ಕೆನರಾ ಬ್ಯಾಂಕ್ ನ ನಿವೃತ್ತ ಮುಖ್ಯ ಗ್ರಾಹಕ ಸೇವಾಧಿಕಾರಿ ಶ್ರೀ ಬಿ.ಎನ್. ಎಸ್ ರತ್ನಾಕರ್ ರವರು ಪುಸ್ತಕಗಳನ್ನು ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಬಳಗದ ಅಧ್ಯಕ್ಷ ಶ್ರೀ ಎಂ ವೆಂಕಟೇಶ ಶೇಷಾದ್ರಿ ಮುಂತಾದವರು ಉಪಸ್ಥಿತರಿದ್ದರು.
ವರದಿ : ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ
