ಕಲಬುರಗಿ/ ಜೇವರ್ಗಿ: ದಿ. 05-01-25 ರಂದು ಕಲಬುರಗಿಯಲ್ಲಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಮೂರ್ತಿಯ ಕೈಯಲ್ಲಿದ್ದ ಖಡ್ಗವನ್ನು ಧ್ವಂಸಗೊಳಿಸಿದ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಿ ಕಠಿಣ ಕ್ರಮ ಜರುಗಿಸಬೇಕೆಂದು ಹಾಗೂ ಈ ಘಟನೆಯನ್ನು ತೀವ್ರವಾಗಿ ಖಂಡಿಸುವುದಾಗಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ವತಿಯಿಂದ ಯುವ ನಾಯಕ ನಟ ಎಂಜೆ ಪ್ರಜ್ವಲ್ ಅವರು ಖಂಡಿಸಿದ್ದಾರೆ.
ತಪ್ಪಿತಸ್ಥ ಆರೋಪಿಗಳ ವಿರುದ್ಧ ಅತಿ ಶೀಘ್ರವೇ ಬಂಧಿಸಿ ಕ್ರಮ ಕೈಗೊಳ್ಳದೆ ಹೋದರೆ ಜೇವರ್ಗಿ ಬಂದ್ ಮಾಡಿ ಉಗ್ರವಾದ ಹೋರಾಟ ಮಾಡುವುದಾಗಿ ಎಂ.ಜೆ ಪ್ರಜ್ವಲ್ ಪತ್ರಿಕಾ ಪ್ರಕಟಣೆಯ ಮೂಲಕ ಎಚ್ಚರಿಕೆ ಗಂಟೆಯನ್ನು ಬಾರಿಸಿದ್ದಾರೆ.
ವರದಿ: ಚಂದ್ರಶೇಖರ ಪಾಟೀಲ್, ಜೇವರ್ಗಿ
