ಶಿವಮೊಗ್ಗ: ಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಭಾರತೀಯ ವೈದ್ಯಕೀಯ ಸಂಘದ ಸಹಯೋಗದಲ್ಲಿ `ಥಟ್ ಅಂತ ಹೇಳಿ’ ಖ್ಯಾತಿಯ ಡಾ.ನಾ.ಸೋಮೇಶ್ವರ ಅವರಿಂದ ನಗರದಲ್ಲಿ ರಸಪ್ರಶ್ನೆ ಕಾರ್ಯಕ್ರಮವನ್ನು ಶಿವಮೊಗ್ಗದಲ್ಲಿ ಆಯೋಜಿಸಲಾಗಿದೆ.
ಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಜನವರಿ 18ರಂದು ಬೆಳಗ್ಗೆ 10 ಗಂಟೆಗೆ ರಸಪ್ರಶ್ನೆ ಕಾರ್ಯಕ್ರಮ ನಡೆಯಲಿದೆ.
ಥಟ್ ಅಂತ ಹೇಳಿ' ಕಾರ್ಯಕ್ರಮ ಖ್ಯಾತಿ ಡಾ.ನಾ. ಸೋಮೇಶ್ವರ ಅವರು
ಕನ್ನಡ, ಕನ್ನಡಿಗ, ಕರ್ನಾಟಕ’ ವಿಷಯದ ಕುರಿತಾಗಿ ವಿಶೇಷ ರಸಪ್ರಶ್ನೆ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.
ವೈದ್ಯಕೀಯ, ವೈದ್ಯಕೀಯೇತರ ವಿದ್ಯಾರ್ಥಿಗಳು ಮತ್ತು ಆಸಕ್ತ ಸಾರ್ವಜನಿಕರೂ ಸಹ ಭಾಗವಹಿಸಲು ಅವಕಾಶವಿದೆ.
ನೋಂದಣಿಗಾಗಿ
ಮೊ: 98440 83284, 90089 79196 ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ.
ವರದಿ: ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ.
