ಕಲಬುರಗಿ ಜಿಲ್ಲೆಯ ಜೇವರ್ಗಿ ಪಟ್ಟಣದ ಓಂ ನಗರದ ನಿವಾಸಿಯಾದ ಕುಮಾರಿ.ಮಹಾಲಕ್ಷ್ಮಿ ತಂದೆ ಯಶ್ವಂತ್ರಾಯ ಬಿರಾದಾರ ಎಂಬ ಅಪ್ರಾಪ್ತ ಬಾಲಕಿ ಆತ್ಮಹತ್ಯೆಗೆ ಶರಣಾಗಿದ್ದು, ಆತ್ಮಹತ್ಯೆಗೆ ಕಾರಣನಾದ ಆರೋಪಿಯನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಹಾಗೂ ವಿವಿಧ ಸಂಘಟನೆಗಳ ವತಿಯಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಪತ್ರ ನೀಡಲಾಯಿತು.
24 ಗಂಟೆಗಳಲ್ಲಿ ಬಂಧಿಸದೆ ಹೋದರೆ ನಾವು ಇಡೀ ಕಲಬುರಗಿ ಜಿಲ್ಲೆಯನ್ನು ಬಂದ್ ಮಾಡಿ ಉಗ್ರವಾದ ಹೋರಾಟ ಮಾಡಬೇಕಾಗುತ್ತದೆ ದಯವಿಟ್ಟು ಅದಕ್ಕೆ ಅವಕಾಶ ಕಲ್ಪಿಸಿಕೊಡದೆ ಅತೀ ಜರೂರಾಗಿ ಆ ವ್ಯಕ್ತಿಯನ್ನು ಬಂಧಿಸಿ ಶಿಕ್ಷೆಗೆ ಒಳಪಡಿಸಬೇಕು ಎಂದು ವಿವಿಧ ಸಂಘಟನೆಗಳು ಮನವಿ ಪತ್ರದ ಮೂಲಕ ತಿಳಿಸಿದ್ದಾರೆ.
ವರದಿ: ಚಂದ್ರಶೇಖರ ಪಾಟೀಲ್
