ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ ಕೊಪ್ಪಳ ಇವರ ಸಹಯೋಗದೊಂದಿಗೆ ಆಯುರ್ವೇದ ಅರಿವು,ಆರೋಗ್ಯ ತಪಾಸಣೆ ಕಾರ್ಯಕ್ರಮ ಜರುಗಿತು.
ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ನಂದಿಹಳ್ಳಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಯೋಗಕ್ಷೇಮದಲ್ಲಿ ಕ್ಷಯರೋಗ ಕುರಿತು ಜಾಗೃತಿ ಹಾಗೂ ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆ ನೀಡಲಾಯಿತು.
ಈ ವೇಳೆಯಲ್ಲಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯ ಗುರುಗಳಾದ ಚಂದ್ರಬಾಯಿ ಮೇಡಂ ವಹಿಸಿದ್ದರು, ಡಾ. ಶಿವಲಿಂಗಪ್ರಭು ಸುಂಕದ ಆಯುರ್ವೇದ ಮತ್ತು ಕ್ಷಯ ರೋಗ ಕುರಿತು ಮಾತನಾಡಿದರು, ಶಾಲೆಯ ಶಿಕ್ಷಕರು ಹಾಗೂ ಶಿಕ್ಷಕಿಯರು ಹಾಜರಿದ್ದರು, ಮಕ್ಕಳ ಆರೋಗ್ಯ ತಪಾಸಣೆ ಮಾಡಲಾಯಿತು ಶರಣಬಸವ ಔಷಧ ವಿತರಿಸಿದರು, ಯೋಗ ತರಬೇತುದಾರ ಬಸವರಾಜ ನಿರೂಪಿಸಿದರು ಹಾಗೂ ಶ್ರೀಮತಿ ಜಯಮ್ಮ ವಂದಿಸಿದರು, ಮಹಿಳೆಯರು ಮಕ್ಕಳು ಶಿಕ್ಷಕಿಯರು ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡರು.
