ಬೆಂಗಳೂರು : ದನದ ಕೆಚ್ಚಲು ಕೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ರಾಜ್ಯಾಧ್ಯಕ್ಷರಾದ ಶ್ರೀ ವಿಜಯೇಂದ್ರ ಯಡಿಯೂರಪ್ಪ ಮತ್ತು ಪ್ರತಿಪಕ್ಷ ನಾಯಕರಾದ ಶ್ರೀ ಆರ್. ಅಶೋಕ್ ಅವರು ಕಾಟನ್ ಪೇಟೆಯ ದುಂಡು ಮಾರಿಯಮ್ಮ ದೇವಸ್ಥಾನದ ಬಳಿ ಇರುವ ಮಾಲೀಕನ ಮನೆಗೆ ಭೇಟಿ ನೀಡಿ ಧೈರ್ಯ ತುಂಬಿ, ಗೋ ಪೂಜೆ ನೆರವೇರಿಸಿ ಪಕ್ಷದ ವತಿಯಿಂದ ಗೋವನ್ನು ಸಂತ್ರಸ್ತರಿಗೆ ನೀಡಿದರು.
ಈ ಸಂದರ್ಭದಲ್ಲಿ ಸಂಸದರಾದ ಶ್ರೀ ಪಿ. ಸಿ. ಮೋಹನ್, ಪರಿಷತ್ ಸದಸ್ಯರಾದ ಶ್ರೀ ಎನ್. ರವಿಕುಮಾರ್, ಮಾಜಿ ಐಪಿಎಸ್ ಅಧಿಕಾರಿಗಳಾದ ಶ್ರೀ ಭಾಸ್ಕರ್ ರಾವ್, ರಾಜ್ಯ ಮುಖ್ಯ ವಕ್ತಾರರಾದ ಶ್ರೀ ಅಶ್ವತ್ಥ ನಾರಾಯಣ, ರಾಜ್ಯ ವಕ್ತಾರರಾದ ಡಾ. ನರೇಂದ್ರ ರಂಗಪ್ಪ, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷರಾದ ಶ್ರೀ ಸಪ್ತಗಿರಿ ಗೌಡ ಮತ್ತು ಪ್ರಮುಖರು ಉಪಸ್ಥಿತರಿದ್ದರು.
ವರದಿ : ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ
