ಚಿಕ್ಕಮಗಳೂರು: ಶೃಂಗೇರಿಯ ಪ್ರಸಿದ್ಧ ಶಾರದಾ ಪೀಠದ ಮಠದಲ್ಲಿ ಇಂದು ಹಮ್ಮಿಕೊಂಡಿದ್ದ ಶೃಂಗೇರಿ ಶಾರದಾ ಪೀಠದ ಜಗದ್ಗುರು ಶಂಕರಾಚಾರ್ಯ ಶ್ರೀ ಭಾರತಿ ತೀರ್ಥ ಮಹಾಸ್ವಾಮೀಜಿ ಅವರ ಸನ್ಯಾಸ ಸ್ವೀಕಾರದ 50ನೇ ವರ್ಷಾಚರಣೆಯ ಸುವರ್ಣ ಭಾರತೀ ಹಾಗೂ ಸ್ತೋತ್ರ ತ್ರಿವೇಣಿಯ ಮಹಾ ಸಮರ್ಪಣೆ ಕಾರ್ಯಕ್ರಮದಲ್ಲಿ ಆಗಮಿಸಿದ ರಾಜ್ಯ ಉಪಮುಖ್ಯಮಂತ್ರಿಗಳು ಕೆಪಿಸಿಸಿ ಅಧ್ಯಕ್ಷರು ಆದ ಶ್ರೀ ಡಿ ಕೆ ಶಿವಕುಮಾರ್ ಅವರನ್ನು ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಶ್ರೀ ಆರ್ ಎಂ ಮಂಜುನಾಥ ಗೌಡರು ಸ್ವಾಗತಿಸಿದರು.
ಈ ಸಂಧರ್ಭದಲ್ಲಿ ಶ್ರೀ ಶಾರದಂಬಾ ತಾಯಿಯ ದರ್ಶನ ಪಡೆದು ನಮ್ಮ ನಾಡಿಗೆ ತಾಯಿಯೇ ಕೃಪೆ ಇರಲಿ ಎಂದು ಶ್ರೀ ಆರ್ ಎಂ ಗೌಡರು ಪ್ರಾರ್ಥಿಸಿದ್ದಾರೆ.
ವರದಿ : ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ
