ಕಲಬುರಗಿ : ಬೀದರ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ದಾಡಗಿ ಕ್ರಾಸ್ ಹತ್ತಿರದ ಇರುವ ವಿಶ್ವಗುರು ಅಣ್ಣ ಬಸವಣ್ಣನವರ ಮೂರ್ತಿಗೆ ಅವಮಾನಿಸಿರುವ ಪ್ರಕರಣ ಖಂಡಿನೀಯ ಎಂದು ಕಲಬುರಗಿ ಜಿಲ್ಲೆಯ ಹಡಪದ ಅಪ್ಪಣ್ಣ (ಕ್ಷೌರಿಕ) ಸಮಾಜದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಡಾ.ಮಲ್ಲಿಕಾರ್ಜುನ ಬಿ ಹಡಪದ ಸುಗೂರ ಎನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಗತ್ತಿಗೆ ಸಮಾನತೆ, ಮಾನವೀಯತೆ ಕಾಯಕ ತತ್ವ ಭೋಧಿಸಿದ ಮಹಾ ಮಾನವತಾವಾದಿ ಬಸವಣ್ಣನವರ ಮೂರ್ತಿಗೆ ಅವಮಾನ ಮಾಡಿರುವುದು ಸಮಾಜ ತಲೆತಗ್ಗಿಸುವಂತಾಗಿದೆ. ಕಲ್ಯಾಣ ರಾಜ್ಯದ ಕೇಂದ್ರ ಸ್ಥಾನವಾದ ಬೀದರ್ ಜಿಲ್ಲೆಯಲ್ಲಿ ಘಟನೆ ನಡೆದಿರುವುದು ತುಂಬಾ ನೋವಿನ ಸಂಗತಿಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದ ಅವರು ಇತ್ತೀಚೆಗೆ ದೇಶದಲ್ಲಿ ಮಹಾ ಪುರುಷರುಗಳಿಗೆ ಅವಮಾನ ಆಗುತ್ತಿರುವುದು, ಬಹಳ ದುಖಃವನ್ನುಂಟು ಮಾಡುತ್ತಿದೆ. ಇಂತಹ ಪ್ರಕರಣಗಳಲ್ಲಿ ಯಾರೇ ಭಾಗಿಯಾಗಿರಲಿ ಅಂಥವರ ವಿರುದ್ಧ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಕಠಣ ಕ್ರಮ ಕೈಗೊಂಡು ಮತ್ತೆ ಇಂತಹ ಪ್ರಕರಣಗಳು ಮರುಕಳಿಸದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಡಾ.ಮಲ್ಲಿಕಾರ್ಜುನ ಬಿ ಹಡಪದ ಸುಗೂರ ಎನ್ ಅವರು ಆಗ್ರಹಿಸಿದ್ದಾರೆ.
