ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನಲ್ಲಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ಎಸಗಿರುವ ಆರೋಪದ ಮೇಲೆ ಹಾರೂಗೇರಿ ಮೂಲದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಸವದತ್ತಿ ಯಲ್ಲಮ್ಮನ ಗುಡ್ಡಕ್ಕೆ ಕರೆದುಕೊಂಡು ಹೋಗಿ ಬರುವುದಾಗಿ ಹೇಳಿ ಇಬ್ಬರು ಅಪ್ರಾಪ್ತೆ ಬಾಲಕಿಯರನ್ನು ಕರೆದೊಯ್ದ ಮೂವರು ಸವಸುದ್ದಿ ಗುಡ್ಡಗಾಡು ಪ್ರದೇಶದಲ್ಲಿ ಓರ್ವ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಇನ್ನೋರ್ವಳ ಮೇಲೆ ಮತ್ತೊಬ್ಬ ಆರೋಪಿ ಕಾರಿನಲ್ಲಿ ಅತ್ಯಾಚಾರ ಎಸಗಿದ್ದಾನೆ. ಘಟನೆ ಹಾರೂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ವರದಿ : ಸಂಗಮೇಶ ಕಾಂಬಳೆ
