ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಗ್ರೂಪ್ ‘ಬಿ’ ವೃಂದದ ಹುದ್ದೆಗಳ ನೇಮಕಾತಿ ಪರೀಕ್ಷೆ-ಸಕಲ ಸಿದ್ದತೆಗೆ ಸೂಚನೆ

ಶಿವಮೊಗ್ಗ: ಕರ್ನಾಟಕ ಲೋಕಸೇವಾ ಆಯೋಗವು ವಿವಿಧ ಇಲಾಖೆಗಳ ಗ್ರೂಪ್ ‘ಬಿ’ ವೃಂದದ ಹುದ್ದೆಗಳ ನೇಮಕಾತಿ ಸಂಬಂಧ ಜ.19 ಮತ್ತು 25 ರಂದು ಪರೀಕ್ಷೆಗಳನ್ನು ನಡೆಸಲಿದ್ದು, ಪರೀಕ್ಷೆಗಳು ಶಾಂತಿಯುತವಾಗಿ ಮತ್ತು ಯಶಸ್ವಿಯಾಗಿ ನಡೆಯಲು ಅಗತ್ಯವಾದ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಕೆಪಿಎಸ್‌ಸಿ ವತಿಯಿಂದ ವಿವಿಧ ಇಲಾಖೆಗಳ ಗ್ರೂಪ್ ಬಿ ವೃಂದದ ಹುದ್ದೆಗಳ ನೇಮಕಾತಿ ಸಂಬಂಧಿಸಿದಂತೆ ನಡೆಸಲಾಗುತ್ತಿರುವ ಪರೀಕ್ಷೆಗಳ ಕುರಿತು ಪರೀಕ್ಷಾ ನಿಯೋಜಿತ ಅಧಿಕಾರಿಗಳೊಂದಿಗೆ ಚರ್ಚಿಸಲು ಕರೆಯಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ದಿನಾಂಕ: 19-01-2025 ರಂದು ಬೆಳಿಗ್ಗೆ 10 ರಿಂದ 11.30 ರವರೆಗೆ ಸಾಮಾನ್ಯ ಪತ್ರಿಕೆ ಪರೀಕ್ಷೆಯು ಶಿವಮೊಗ್ಗ ನಗರದ ಒಟ್ಟು 25 ಪರೀಕ್ಷಾ ಕೇಂದ್ರಗಳಲ್ಲಿ ಹಾಗೂ ದಿ: 25-01-2025 ರಂದು ಮಧ್ಯಾಹ್ನ 3 ರಿಂದ ಸಂಜೆ 5 ಗಂಟೆವರೆಗೆ ನಿರ್ದಿಷ್ಟ ಪತ್ರಿಕೆ ಪರೀಕ್ಷೆಯು ನಗರದ 23 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ.
ಜ.19 ರಂದು ನಡೆಯುವ ಸಾಮಾನ್ಯ ಪತ್ರಿಕೆ ಪರೀಕ್ಷೆಗೆ ನಗರದಲ್ಲಿ ಒಟ್ಟು 7182 ಅಭ್ಯರ್ಥಿಗಳು ಹಾಗೂ ಜ.25 ರಂದು ನಡೆಯುವ ನಿರ್ದಿಷ್ಟ ಪತ್ರಿಕೆಗೆ 6414 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
ಈಗಾಗಲೇ ಪರೀಕ್ಷಾ ಕೇಂದ್ರಗಳಿಗೆ ಸ್ಥಳೀಯ ನಿರೀಕ್ಷಣಾಧಿಕಾರಿಗಳು, ಮಾರ್ಗಾಧಿಕಾರಿಗಳು, ವೀಕ್ಷಕರು ಮತ್ತು ಇತರೆ ಸಿಬ್ಬಂದಿಗಳನ್ನು ನಿಯೋಜಿಸಿ, ಸೂಕ್ತ ನಿರ್ದೇಶನ ಮತ್ತು ಸೂಚನೆಗಳನ್ನು ನೀಡಲಾಗಿದೆ.
ಪರೀಕ್ಷಾ ಕೇಂದ್ರಗಳಲ್ಲಿ ವಿಡಿಯೋಗ್ರಫಿ ಮಾಡಲಾಗುವುದು. ಎಲ್ಲಾ ಕೇಂದ್ರಗಳಲ್ಲಿ ಸಿಸಿ ಟಿವಿ ಇರುತ್ತದೆ. ಜೊತೆಗೆ ಜಾಮರ್‌ಗಳನ್ನು ಅಳವಡಿಸಲಾಗುವುದು. ಪರೀಕ್ಷಾ ಕೇಂದ್ರದೊಳಗೆ ಯಾವುದೇ ಎಲೆಕ್ಟ್ರಾನಿಕ್ ವಸ್ತುಗಳಿಗೆ ಅವಕಾಶ ಇರುವುದಿಲ್ಲ.
ನಿಯೋಜಿತ ಪೊಲೀಸರಿಂದ ಅಭ್ಯರ್ಥಿಗಳ ತಪಾಸಣೆ ನಡೆಸಿ ಕೇಂದ್ರಗಳ ಒಳಗೆ ಬಿಡಲಾಗುವುದು. ಅಂಗವಿಕಲ ಅಭ್ಯರ್ಥಿಗಳಿಗ ಲಿಪಿಕಾರರ ಸೇವೆಯನ್ನು ಹಾಗೂ ಚಲನವಲನ ವೈಕಲ್ಯವುಳ್ಳ ವಿಕಲಚೇತನ ಅಭ್ಯರ್ಥಿಗಳಿಗೆ ವೀಲ್‌ಚೇರ್ ಒದಗಿಸಲಾಗುವುದು ಎಂದರು.
ಪರೀಕ್ಷಾ ದಿನದಂದು ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀ.ಫಾಸಲೆಯಲ್ಲಿ ಸಾರ್ವಜನಿಕ ಪ್ರವೇಶ ನಿಷೇಧಿಸಿ ಆದೇಶಿಸಲಾಗಿದೆ ಎಂದ ಅವರು ಪರೀಕ್ಷಾ ಕೇಂದ್ರಗಳಲ್ಲಿ ಪೀಠೋಪಕರಣ ವ್ಯವಸ್ಥೆ, ಕುಡಿಯುವ ನೀರು ಮತ್ತು ಮೂಲಭೂತ ಸೌಕರ್ಯಗಳನ್ನು ವ್ಯವಸ್ಥಿತವಾಗಿ ಮಾಡಬೇಕು. ನಿಯೋಜಿತ ಅಧಿಕಾರಿಗಳು ಪರೀಕ್ಷಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಪರೀಕ್ಷೆಗಳನ್ನು ಶಾಂತಿಯುತವಾಗಿ, ಯಾವುದೇ ಗೊಂದಲಗಳಿಗೆ ಆಸ್ಪದವಾಗದಂತೆ ಯಶಸ್ವಿಯಾಗಿ ನಡೆಸಬೇಕೆಂದು ಸೂಚನೆ ನೀಡಿದರು.
ಸಭೆಯಲ್ಲಿ ಡಿಡಿಪಿಐ ಮಂಜುನಾಥ್, ಜಿಲ್ಲಾ ಖಜಾನಾಧಿಕಾರಿ ಸಾವಿತ್ರಿ, ಪರೀಕ್ಷೆಗೆ ನಿಯೋಜಿಸಲಾದ ಅಧಿಕಾರಿಗಳು, ಸಿಬ್ಬಂದಿಗಳು ಪಾಲ್ಗೊಂಡಿದ್ದರು.

ವರದಿ : ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ