ಶಿವಮೊಗ್ಗ: ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಆಡಳಿತ ಮಂಡಳಿಯ ನಿರ್ದೇಶಕರ ಸಭೆಯು ಇತ್ತೀಚಿಗೆ ಶಿವಮೊಗ್ಗದಲ್ಲಿ ಜರುಗಿತು.
ಮಲೆನಾಡು ಅಭಿವೃದ್ಧಿ ಮಂಡಳಿ ಅಧ್ಯಕ್ಷ ಹಾಗೂ ಡಿ ಸಿ ಸಿ ಬ್ಯಾಂಕ್ ಅಧ್ಯಕ್ಷರಾದ ಶ್ರೀ ಆರ್ ಎಂ ಮಂಜುನಾಥ ಗೌಡ ಅವರು ಭಾಗವಹಿಸಿ ಮುಂದಿನ ಯೋಜನೆಗಳ ಬಗ್ಗೆ ಚರ್ಚೆ ಹಾಗೂ ವಿಚಾರ ವಿನಿಮಯ ನಡೆಸಿದರು.
ಈ ಸಂಧರ್ಭದಲ್ಲಿ ಬ್ಯಾಂಕಿನ ನಿರ್ದೇಶಕರು ಹಾಗೂ ಸಾಗರ ಕ್ಷೇತ್ರದ ಶಾಸಕರು ಆದ ಶ್ರೀ ಬೇಳೂರು ಗೋಪಾಲಕೃಷ್ಣ ಅವರು ಬ್ಯಾಂಕಿನ ಉಪಾಧ್ಯಕ್ಷರಾದ ಶ್ರೀ ಎಸ್ ಕೆ ಮರಿಯಪ್ಪನವರು ಮತ್ತು ಗೌರವಾನ್ವಿತ ಎಲ್ಲಾ ನಿರ್ದೇಶಕರುಗಳು ಭಾಗವಹಿಸಿದ್ದರು.
ವರದಿ : ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ
