
ಬಾಗಲಕೋಟೆ ಜಿಲ್ಲೆಯ ಬಾದಾಮಿ ನಗರದಲ್ಲಿ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯತ ಮಹಿಳಾ
ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಾರ್ವಜನಿಕ ಶಿಕ್ಷಣ ಇಲಾಖೆ, ಆರೋಗ್ಯಇಲಾಖೆ ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಬಾದಾಮಿ ಸಂಯೋಗದಿಂದ ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯ 10ವರ್ಷ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಅರಿವು ಕಾರ್ಯಕ್ರಮ ಸಹಿ
ಅಭಿಯಾನ ಮತ್ತು ಪ್ರತಿಜ್ಞಾ ವಿಧಿ ಕಾರ್ಯಕ್ರಮ ಜರುಗಿತು.
ಕಾರ್ಯಕ್ರಮದ ಉದ್ಘಾಟನೆಯ ನಂತರ
ಮಕ್ಕಳಿಂದ ಕೇಕ್ ಕಟ್ಟ ಮಾಡಿಸಿ ಸಿಹಿ ತಿನ್ನಿಸುವದರ ಮೂಲಕ ಕಾರ್ಯಕ್ರಮ ಮುಂದುವರೆಯಿತು.
ಕಾರ್ಯಕ್ರಮದಲ್ಲಿ ಸಂಸದರಾದ ಶ್ರೀ ಪಿ.ಸಿ.ಗದ್ದಿಗೌಡರ್ ರವರು ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಶಾಸಕರಾದ ಬಿ ಬಿ ಚಿಮ್ಮನಕಟ್ಟಿ, ಪುರಸಭೆ ಅಧ್ಯಕ್ಷರು, ತಾಲ್ಲೂಕಿನ ಅಧಿಕಾರಿಗಳು, ಸಾರ್ವತ್ರಿಕರು ಉಪಸ್ಥಿತರಿದ್ದರು.
ವರದಿ ನಿಂಬಯ್ಯ ಕುಲಕರ್ಣಿ, ಬಾದಾಮಿ
