ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಮತದಾನದಲ್ಲಿ ಪ್ರತಿಯೊಬ್ಬರೂ ಭಾಗವಹಿಸಿ: ನ್ಯಾ. ಆಚಪ್ಪ ದೊಡ್ಡಬಸವರಾಜ ಕರೆ

ಸಿಂಧನೂರು: ನಮ್ಮ ಪ್ರಜಾಪ್ರಭುತ್ವದಲ್ಲಿ ತಮಗೆ ಬೇಕಾದ ನಾಯಕರನ್ನು ಆಯ್ಕೆ ಮಾಡಿಕೊಳ್ಳಲು ಅವಕಾಶವಿದ್ದು, ಪ್ರತಿಯೊಬ್ಬರೂ ತಮ್ಮ ಮತವನ್ನು ಚಲಾಯಿಸಬೇಕು ಎಂದು ಗೌರವಾನ್ವಿತ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಆಚಪ್ಪ ದೊಡ್ಡ ಬಸವರಾಜು ಕರೆ ನೀಡಿದರು.
ಅವರು ಶನಿವಾರದಂದು ನಗರದ ತಾಲೂಕ ಪಂಚಾಯಿತಿ ಸಭಾಂಗಣದಲ್ಲಿ ತಾಲೂಕು ಆಡಳಿತ ಮತ್ತು ತಾಲೂಕು ಕಾನೂನು ಸೇವಾ ಸಮಿತಿಯ ವತಿಯಿಂದ ಹಮ್ಮಿಕೊಂಡಿದ್ದ ‘ರಾಷ್ಟ್ರೀಯ ಮತದಾರರ ದಿನಾಚರಣೆ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ , ಚುನಾವಣಾ ಆಯೋಗದ ಆಶಯದಂತೆ ಮುಕ್ತ ಮತ್ತು ನ್ಯಾಯ ಸಮ್ಮತ ಚುನಾವಣೆಗಳು ನಡೆಯಬೇಕು. ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ಶ್ರಮಿಸಬೇಕು. ತಾವು ಮತ್ತು ತಮ್ಮ ಕುಟುಂಬದ ಸದಸ್ಯರು ಯಾವುದೇ ಆಸೆ-ಆಮಿಷಗಳಿಗೆ ಒಳಗಾಗದೆ ಮತ ಚಲಾಯಿಸಲು ಪ್ರೇರೇಪಿಸಬೇಕು ಎಂದು ಯುವ ಮತದಾರರಿಗೆ ಮತ್ತು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ತಹಶೀಲ್ದಾರ್ ಅರುಣ್ ಎಚ್ ದೇಸಾಯಿ ಮಾತನಾಡಿ, ಅರ್ಹ ವಯಸ್ಸಿನ ಎಲ್ಲಾ ವಿದ್ಯಾರ್ಥಿಗಳು, ಯುವಕರು ಯುವತಿಯರು ನೋಂದಣಿ ಮಾಡಿಸಿಕೊಳ್ಳಬೇಕು. ನೋಂದಣಿ ಮಾಡಿಸಿಕೊಂಡ ಮತದಾರರು ತಮ್ಮ ಗುರುತಿನ ಚೀಟಿಯನ್ನು ಪಡೆದು ಕಡ್ಡಾಯವಾಗಿ ಮತ ಚಲಾಯಿಸಬೇಕು ಎಂದು ಹೇಳುತ್ತಾ , ರಾಷ್ಟ್ರೀಯ ಮತದಾರ ದಿನಾಚರಣೆ ನಡೆದು ಬಂದ ಇತಿಹಾಸ, ಚುನಾವಣೆಗಳ ತಯಾರಿ ಮತ್ತು ಪ್ರಕ್ರಿಯೆ ಕುರಿತು ಹಾಗೂ ಚುನಾವಣೆಯ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ತಾಲೂಕ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ್ ಮಾತನಾಡುತ್ತಾ, ಚುನಾವಣಾ ಆಯೋಗ ಹಾಗೂ ಅಧಿಕಾರಿಗಳ ಪರಿಶ್ರಮದಿಂದ ಈ ದೇಶದಲ್ಲಿ ಅತ್ಯಂತ ವ್ಯವಸ್ಥಿತವಾಗಿ ಚುನಾವಣೆಗಳು ನಡೆಯುತ್ತವೆ. ಗ್ರಾಮೀಣ ಪ್ರದೇಶಕ್ಕಿಂತ ನಗರ ಪ್ರದೇಶದಲ್ಲಿ ಮತ ಚಲಾವಣೆ ಪ್ರಮಾಣ ಕಡಿಮೆ ಇದ್ದು, ಇದನ್ನು ಸುಧಾರಿಸಲು ಒಬ್ಬ ಮತದಾರರು ಜಾಗೃತರಾಗಬೇಕು. ಮತದಾನದ ದಿನದಂದು ಯಾವುದೇ ಪ್ರವಾಸ, ಸ್ಥಳ ವೀಕ್ಷಣೆಗೆ ಹೋಗದೆ ತಮ್ಮ ಮತ ಇರುವ ಸ್ಥಳದಲ್ಲಿ ಇದ್ದು ಕಡ್ಡಾಯವಾಗಿ ಮತ ಚಲಾಯಿಸಲು ಕೋರಿದರು.
ಈ ಸಂದರ್ಭದಲ್ಲಿ 2ನೇ ಅಪರ ಸಿವಿಲ್ ನ್ಯಾಯಾಧೀಶರಾದ ಗೌರವಾನ್ವಿತ ಶ್ರೀಮತಿ ರೂಪ ಸಿ. ವಗ್ಗಾ , ಕ್ಷೇತ್ರ ಶಿಕ್ಷಣಾಧಿಕಾರಿ ವಾಜೀದಾ ಮಜೀದ್, ಸಿ ಡಿ ಪಿ ಓ ಲಿಂಗನಗೌಡ, ತಾಲೂಕ ಮಟ್ಟದ ಅಧಿಕಾರಿಗಳಾದ ಲಿಂಗಪ್ಪ ಅಂಗಡಿ, ಡಾ. ಅಯ್ಯನಗೌಡ, ಜಿಲ್ಲಾ ಪಂಚಾಯತಿ ಇಂಜಿನಿಯರಿಂಗ್ ಉಪ ವಿಭಾಗದ ಎಇಇ ಧನರಾಜ, ಬಿ.ಆರ್.ಸಿ ಸಮನ್ವಯ ಅಧಿಕಾರಿ ಬಸವಲಿಂಗಪ್ಪ, ಮತದಾರರ ಸಾಕ್ಷರತಾ ಕ್ಲಬ್ (ಈ.ಎಲ್.ಸಿ)ಗಳ ಜಿಲ್ಲಾ ಸಂಪನ್ಮೂಲ ವ್ಯಕ್ತಿ ವೀರೇಶ ಗೋನವಾರ, ನ್ಯಾಯಾಂಗ ಇಲಾಖೆಯ ನಾರಾಯಣಸ್ವಾಮಿ, ತಹಶೀಲ್ದಾರ್ ಕಚೇರಿಯ ಲಿಂಗಪ್ಪ, ಬಸವರಾಜ, ರಾಜಾಭಕ್ಷಿ, ಶಿಕ್ಷಣ ಸಂಯೋಜಕರಾದ ಸಾವನ್ ಸಾಬ್ ಸೇರಿದಂತೆ ವಿವಿಧ ಶಾಲಾ -ಕಾಲೇಜುಗಳ ಶಿಕ್ಷಕರು, ಉಪನ್ಯಾಸಕರು, ವಿದ್ಯಾರ್ಥಿಗಳು ಹಾಜರಿದ್ದರು.

ಪ್ರತಿಜ್ಞಾವಿಧಿ ಬೋಧನೆ

ಇದೇ ಸಂದರ್ಭದಲ್ಲಿ ನೆರದಿದ್ದ ಅಧಿಕಾರಿ, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ರಾಷ್ಟ್ರೀಯ ಮತದಾರರ ದಿನಾಚರಣೆಯ ಅಂಗವಾಗಿ ಗೌರವಾನ್ವಿತ ಪ್ರಧಾನ ಸಿವಿಲ್ ನ್ಯಾಯಾಧೀಶರು ಪ್ರತಿಜ್ಞಾವಿಧಿಯನ್ನು ಬೋಧಿಸಿದರು.

ಪ್ರಶಸ್ತಿ

ಈ.ಎಲ್.ಸಿ ಕ್ಲಬ್ ಗಳ ವತಿಯಿಂದ ಹಮ್ಮಿಕೊಂಡಿದ್ದ ತಾಲೂಕ ಮಟ್ಟದ ಹಾಗೂ ಜಿಲ್ಲಾ ಮಟ್ಟದಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರಗಳನ್ನು ನೀಡಲಾಯಿತು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ