
ವಿಜಯನಗರ/ಕೊಟ್ಟೂರು: ಇಂದು ಕೊಟ್ಟೂರು ತಾಲೂಕು ಆಡಳಿತದ ವತಿಯಿಂದ ಆಯೋಜಿಸಿದ 76ನೇ ಗಣರಾಜ್ಯೋತ್ಸವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ಯುತ ಕೆ ನೇಮಿರಾಜ್ ನಾಯ್ಕ್ ಅವರು ವಹಿಸಿಕೊಂಡು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ತಾಲೂಕು ದಂಡಾಧಿಕಾರಿಗಳು, ಪೊಲೀಸ್ ವೃತ್ತಿ ನಿರೀಕ್ಷಕರು ಮತ್ತು ಪಟ್ಟಣ ಪಂಚಾಯಿತಿ ಅಧ್ಯಕ್ಷರು, ಮುಖ್ಯಾಧಿಕಾರಿಗಳು,ಸದಸ್ಯರು ಭಾಗಿಯಾಗಿದ್ದರು
ಈ ಸಂದರ್ಭದಲ್ಲಿ ಮುಖಂಡರಾದ ಎಂ.ಎಂ.ಜೆ. ಹರ್ಷವರ್ಧನ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರು ಹಾಗೂ ಬಾದಾಮಿ ಮೃತ್ಯುಂಜಯ್ ಮತ್ತು ಕೊಟ್ಟೂರಿನ ಅನೇಕ ಮುಖಂಡರುಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ವರದಿಗಾರರು: ಎನ್ ಚಂದ್ರಗೌಡ
