ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

76ನೇ ಗಣರಾಜ್ಯೋತ್ಸವ ಕಾರ್ಯಕ್ರಮ ಸಂಭ್ರಮ

ಹನೂರು: ಪಟ್ಟಣದ ಮಹದೇಶ್ವರ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ 76ನೇ ಗಣರಾಜ್ಯೋತ್ಸವ ಕಾರ್ಯಕ್ರಮ ಸಂಭ್ರಮ ಸಡಗರದಿಂದ ಜರುಗಿತು.

ತಹಸಿಲ್ದಾರ್ ಗುರುಪ್ರಸಾದ್ ಪ್ರಾಸ್ತಾವಿಕವಾಗಿ 76ನೇ ಗಣರಾಜ್ಯೋತ್ಸವದ ಶುಭ ಸಂದೇಶದ ನುಡಿಗಳನ್ನಾಡಿದರು. ಪ.ಪಂ ನಿರ್ವಹಣಾಧಿಕಾರಿ ಉಮೇಶ್ ಸಂವಿಧಾನದ ಪೀಠಿಕೆಯ ಪ್ರತಿಜ್ಞಾವಿಧಿಯನ್ನು ಬೋಧಿಸಿದರು, ಮುಖ್ಯ ಭಾಷಣಕಾರರಾಗಿ ಆಗಮಿಸಿದ್ದ ಕೊಳ್ಳೇಗಾಲ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಉಪನ್ಯಾಸಕಿ ಲತಾ ಮಣಿ ಸಂವಿಧಾನ ಮತ್ತು ಅದರ ಆಶಯಗಳು ಸಂವಿಧಾನ ರಚನೆಯಲ್ಲಿ ಡಾಕ್ಟರ್ ಅಂಬೇಡ್ಕರ್ ಅವರ ಪಾತ್ರ ಹಾಗೂ ಕೊಡುಗೆ ಬಗ್ಗೆ ಮಾಹಿತಿ ನೀಡಿದರು. ಇತ್ತೀಚಿಗೆ ವಿಶೇಷ ಚೇತನರ ಕ್ರೀಡಾಕೂಟದಲ್ಲಿ ರಾಜ್ಯಮಟ್ಟದಿಂದ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಮಂಗಲ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅನುಷ ಹಾಗೂ ಬಿ.ಎಂ.ಜಿ ಪ್ರೌಢಶಾಲೆಯ ನಾಗವೇಣಿ ಇಬ್ಬರು ವಿದ್ಯಾರ್ಥಿಗಳನ್ನು ಹಾಗೂ ನಿವೃತ್ತ ಸೈನಿಕರಾದ ಮಾಣಿಕ್ಯಂ ಹಾಗೂ ಬೆಂಜಮೀನ್ ಅವರುಗಳನ್ನು ಸನ್ಮಾನಿಸಿ ಗೌರವಿಸಿದ್ದು ವಿಶೇಷವಾಗಿತ್ತು. ವಿವಿಧ ಶಾಲೆಯ ವಿದ್ಯಾರ್ಥಿಗಳು ದೇಶಭಕ್ತಿ ಹಾಗೂ ಕರುನಾಡಿನ ಸಂಸ್ಕೃತಿಯನ್ನು ಬಿಂಬಿಸುವ ಗೀತೆಗಳಿಗೆ ನೃತ್ಯ ಪ್ರದರ್ಶನ ಗಮನ ಸೆಳೆಯಿತು. ವಿವಿಧ ಶಾಲೆಯ ವಿದ್ಯಾರ್ಥಿಗಳು ನಡೆಸಿಕೊಟ್ಟ ಆಕರ್ಷಕ ಪಥಸಂಚಲನಕ್ಕೆ ಶಾಸಕ ಮಂಜುನಾಥ್ ಮೆಚ್ಚುಗೆ ವ್ಯಕ್ತಪಡಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಶಾಸಕ ರಾದ ಎಂ ಆರ್ ಮಂಜುನಾಥ್, ವಿವಿಧ ಜಾತಿ ಧರ್ಮ ಭಾಷೆ ಆಚಾರ ವಿಚಾರ ಭೌಗೋಳಿಕ ವಿಭಿನ್ನತೆಯನ್ನು ನಮ್ಮ ದೇಶದಲ್ಲಿ ಕಾಣಬಹುದಾಗಿದೆ.
ಇಂತಹ ವಿಭಿನ್ನ ಮತ್ತು ವಿಶಿಷ್ಟ ದೇಶದಲ್ಲಿ ಏಕತೆ ಮತ್ತು ಸಮಾನತೆಯಿಂದ ಬದುಕಲು ನಮ್ಮ ಸಂವಿಧಾನ ಕಾರಣವಾಗಿದೆ. ಇಂತಹ ಸುದಿನದಲ್ಲಿ ಮಹಾತ್ಮ ಗಾಂಧೀಜಿ ಡಾ. ಅಂಬೇಡ್ಕರ್ ಮುಂತಾದ ಮಹನೀಯರನ್ನು ಸ್ಮರಿಸಬೇಕು ಬಹಳಷ್ಟು ಚಿಂತನ ಮಂಥನಗಳನ್ನು ನಡೆಸಿ ವಿಶ್ವದ ಬೃಹತ್ ಸಂವಿಧಾನಕ್ಕೆ ಕಾರಣರಾದ ಡಾ.ಅಂಬೇಡ್ಕರ್ ಅವರಿಗೆ ವಿಶೇಷ ನಮನವನ್ನು ಸಲ್ಲಿಸುತ್ತೇನೆ. ಇಂದು ಕ್ರಾಂತಿ ಇಲ್ಲದೆ ಶಾಂತಿಯಿಂದ ದೇಶ ಮುನ್ನಡೆಯುತ್ತಿದ್ದರೆ ಅದು ಸಂವಿಧಾನದಿಂದ. ಸದೃಢ ಸಮಾಜಕ್ಕೆ ಯುವಕರ ಕೊಡುಗೆ ಪ್ರಮುಖವಾದದ್ದು ಯುವಜನತೆ ಮನಸ್ಸು ಮಾಡಿದರೆ ದೇಶದ ದಿಕ್ಕನ್ನೇ ಬದಲಾಯಿಸಬಹುದು. ಯುವ ಪೀಳಿಗೆ ಒಳ್ಳೆ ಪುಸ್ತಕ ಮತ್ತು ಪತ್ರಿಕೆಗಳನ್ನು ಓದುವತ್ತ ಗಮನ ಹರಿಸಬೇಕು ಮೊಬೈಲ್ ಬಳಕೆಯನ್ನು ಸದುದ್ದೇಶಕ್ಕೆ ಬಳಸಿಕೊಳ್ಳಬೇಕು. ಪಿಯುಸಿ ಇಂದ 5 ವರ್ಷಗಳವರೆಗೆ ಕಷ್ಟಪಟ್ಟು ಕಲಿತರೆ ಅದು ನಿಮ್ಮನ್ನು ಸುಖವಾಗಿಡಲು ದಾರಿಯಾಗುತ್ತದೆ. ಇಲ್ಲದಿದ್ದರೆ ಐವತ್ತು ವರ್ಷ ಕಾಡಿ ಬೇಡುವ ಪರಿಸ್ಥಿತಿ ಬರಲಿದೆ ನಿಮ್ಮ ಜೀವನದ ನಾವಿಕ ನೀವೇ ಆಗಬೇಕು ಕ್ಷೇತ್ರದಲ್ಲಿ ಬಡತನ ನಿರುದ್ಯೋಗ ತಾಂಡವಾಡುತ್ತಿದೆ, ಈ ನಿಟ್ಟಿನಲ್ಲಿ ಉದ್ಯೋಗ ಅವಕಾಶ ಕಲ್ಪಿಸಲು ಹಾಗೂ ಕ್ಷೇತ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ. ಕ್ಯಾಬಿನೆಟ್ ಸಭೆ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವುದರಿಂದ ಸಂತಸ ತಂದಿದೆ. ಕ್ಷೇತ್ರ ಹಾಗೂ ಜಿಲ್ಲೆ ಸರ್ವಾಂಗೀಣ ಅಭಿವೃದ್ಧಿಗೆ ವರದಾನವಾಗಲಿದೆ ಎಂದರು.

ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಮುಮ್ತಾಜ್ ಬಾನು, ಉಪಾಧ್ಯಕ್ಷ ಆನಂದ್, ಸದಸ್ಯರುಗಳಾದ ಹರೀಶ್ ಕುಮಾರ್, ಸೋಮಶೇಖರ್,ಸುದೇಶ್, ಮಹೇಶ್ ನಾಯಕ, ಮಂಜುಳಾ, ರೂಪ, ಪ್ರೇಮಲತಾ ನಾಮನಿರ್ದೇಶಿತ ಸದಸ್ಯರಾದ ಬಸವರಾಜು, ಮಹಾದೇಶ್, ನವೀನ್ ಕುಮಾರ್ ಮುಖ್ಯ ಅಧಿಕಾರಿ ಅಶೋಕ್, ಕ್ಷೇತ್ರ ಶಿಕ್ಷಣಾಧಿಕಾರಿ ಗುರುಲಿಂಗಯ್ಯ, ಇನ್ಸ್ ಪೆಕ್ಟರ್ ಶಶಿಕುಮಾರ್ ಇನ್ನಿತರರು ಇದ್ದರು.

ವರದಿ: ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ