ವಿಜಯನಗರ: ಇಂದು ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ ಶಾಸಕ ಎಂ ಟಿ ಶ್ರೀನಿವಾಸ್ ಅವರ ಅಧ್ಯಕ್ಷತೆಯಲ್ಲಿ ದಿನಾಂಕ 28.01.2025 ರಂದು ಕೂಡ್ಲಿಗಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಸಲಾಯಿತು.
ಗ್ರಾಮೀಣ ಭಾಗದಲ್ಲಿ ಜಾತ್ರೋತ್ಸವಗಳು ನಡೆಯುತ್ತಿರುವುದರಿಂದ ವಿದ್ಯುತ್ ಅವಘಡ ಆಗದಂತೆ ಮುನ್ನೆಚ್ಚರಿಕೆಯಾಗಿ ಜೋತು ಬಿದ್ದ ಲೈನ್ ಗಳು ಹಾಗೂ ಶಿಥಿಲವಾಗಿರುವ ಕಂಬಗಳನ್ನು ತೆರವುಗೊಳಿಸಬೇಕು, ಪ್ರಗತಿಯಲ್ಲಿರುವ ಕಾಮಗಾರಿ ಕೆಲಸಗಳು ಯಾವ ಹಂತದಲ್ಲಿದೆ ಎನ್ನುವುದರ ಬಗ್ಗೆ ಮಾಹಿತಿ ಪಡೆದಕೊಳ್ಳಬೇಕು, ಊರಿನ ಸಿ.ಸಿ ರಸ್ತೆ ಹಾಗೂ ಚರಂಡಿಗಳ ರಸ್ತೆಯ ಕಾಮಗಾರಿಗಳು ಯಾವ ಪ್ರಗತಿ ಹಂತದಲ್ಲಿದೆ ಇನ್ನೂ ಎಷ್ಟು ಸಮಯವನ್ನು ಕಳೆದುಕೊಳ್ಳುತ್ತದೆ ಎಂಬುದನ್ನು ಸ್ಥಳಕ್ಕೆ ಸಂಬಂಧಿಸಿದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿ ವರದಿಯನ್ನು ಒಪ್ಪಿಸಬೇಕು, ಸಾರ್ವಜನಿಕರಲ್ಲಿ ಮೂಲಭೂತ ಸೌಕರ್ಯಗಳ ಬಗ್ಗೆ ಕುಂದು ಕೊರತೆಗಳ ಬಗ್ಗೆ ಮಾಹಿತಿಯನ್ನು ಪಡೆದುಕೊಳ್ಳಬೇಕು ಯಾವುದೇ ತೊಂದರೆಗಳಿದ್ದರೆ ಅದನ್ನು ಪರಿಶೀಲಿಸಿ ಸಾಧ್ಯವಾದರೆ ಅದನ್ನು ಬಗೆಹರಿಸಿ ಎಂದರು.
ಈ ಸಂದರ್ಭದಲ್ಲಿ ತಹಶೀಲ್ದಾರರು, ತಾಲೂಕು ಪಂಚಾಯಿತಿ ಇ ಒ, ಸಿಪಿಐ ತಳವಾರ್ ಸುರೇಶ್, ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ವರದಿ : ಗುರುರಾಜ್ ಎಲ್, ಕಲ್ಲಹಳ್ಳಿ ಟಿ
