ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕುಷ್ಠರೋಗ ಜಾಗೃತಿ ಆಂದೋಲನ – ಸೈಕಲ್ ಮತ್ತು ನಡಿಗೆ ಜಾಥಾ

ಶಿವಮೊಗ್ಗ : ಕುಷ್ಠರೋಗ ಅಂಟು ರೋಗವಲ್ಲ, ಈ ರೋಗದ ಬಗ್ಗೆ ತಾರತಮ್ಯ, ಬೇಧ-ಭಾವ ಬೇಡ ಆದರೆ ಕುಷ್ಠರೋಗ ಇರುವ ವ್ಯಕ್ತಿ ಕೆಮ್ಮುವಾಗ ಅಥವಾ ಸೀನಿದಾಗ ಇನ್ನೊಬ್ಬರಿಗೆ ಹರಡಬಹುದಾದ್ದರಿಂದ ಎಚ್ಚರಿಕೆಯಿಂದ ಇರಬೇಕು ಎಂದು ರಾಷ್ಟ್ರೀಯ ಆರೋಗ್ಯ ಅಭಿಯಾನ ಅಡಿಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕುಷ್ಠರೋಗ ನಿವಾರಣ ಕಾರ್ಯಕ್ರಮ ಶಿವಮೊಗ್ಗ, ಭಾರತೀಯ ವೈದ್ಯಕೀಯ ಸಂಘ ಶಿವಮೊಗ್ಗ ಹಾಗೂ ಸುಬ್ಬಯ್ಯ ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಇವರುಗಳ ಸಹಯೋಗದೊಂದಿಗೆ ಗುರುವಾರ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಸ್ಪರ್ಶ್ ಕುಷ್ಠರೋಗ ಜಾಗೃತಿ ಆಂದೋಲನ ಕಾರ್ಯಕ್ರಮಕ್ಕೆ ಹಸಿರು ನಿಶಾನೆಯ ತೋರುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಈಗಾಗಲೇ 53 ಕುಷ್ಠರೋಗ ಪ್ರಕರಣಗಳು ಇವೆ. ಇದಲ್ಲದೇ ಏಪ್ರಿಲ್ ನಿಂದ ಇಲ್ಲಿಯವರೆಗೂ 32 ಪ್ರಕರಣಗಳನ್ನು ಪತ್ತೆ ಹಚ್ಚಿದ್ದೇವೆ ಅದರಲ್ಲಿ ಶಿಕಾರಿಪುರ ತಾಲ್ಲೂಕಿನಲ್ಲಿ ಹೆಚ್ಚಿನ ಪ್ರಕರಣಗಳು ದಾಖಲಾಗಿವೆ.
ನಮ್ಮ ದೇಶ ತುಂಬು ಕುಟುಂಬ ಹೊಂದಿರುವ ದೇಶವಾಗಿದೆ. ಇದರಿಂದ ಕುಷ್ಠರೋಗ ಹರಡುವ ಸಾಧ್ಯತೆಗಳು ಹೆಚ್ಚು ಆದ್ದರಿಂದ ನಾವು ಕೆಮ್ಮುವಾಗ, ಸೀನುವಾಗ ಎಚ್ಚರಿಕೆ ವಹಿಸಬೇಕು. ಇದಲ್ಲದೇ ದೇಹದಲ್ಲಿ ಬಿಳಿ ಮಚ್ಚೆಗಳು ಕಂಡು ಬಂದಲ್ಲಿ ನಿರ್ಲಕ್ಷ್ಯತನ ಮಾಡದೆ ಕೂಡಲೇ ವೈದ್ಯರನ್ನು ಸಂಪರ್ಕಿಸಿ ಸಲಹೆ ತೆಗೆದುಕೊಳ್ಳಬೇಕು ಎಂದು ಹೇಳಿದರು.
ಶಿಕಾರಿಪುರ ಅಲ್ಲದೆ ಜಿಲ್ಲೆಯ ಅನೇಕ ತಾಲ್ಲೂಕುಗಳಲ್ಲಿ ಕುಷ್ಠರೋಗ ಪ್ರಕರಣಗಳು ಕಂಡು ಬಂದಿವೆ. ಆದರೆ ಪ್ರಮಾಣ ಕಡಿಮೆ ಇದೆ. ಜಿಲ್ಲೆಯ ಯಾವ ತಾಲ್ಲೂಕು ಕುಷ್ಠರೋಗದಿಂದ ಹೊರತಾಗಿಲ್ಲ ಇದನ್ನು ತೊಡೆದು ಹಾಕಲು ಆರೋಗ್ಯ ಇಲಾಖೆ ಪಣತೊಟ್ಟಿದ್ದು, ಹಗಲು ರಾತ್ರಿ ಎನ್ನದೆ ಶ್ರಮಿಸುತ್ತಿದೆ ಎಂದರು.
ಮೆಗ್ಗಾನ್ ಬೋಧನಾ ಜಿಲ್ಲಾಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಡಾ.ಟಿ.ಡಿ.ತಿಮ್ಮಪ್ಪ ಮಾತನಾಡಿ, ನಾವು ಸಣ್ಣ ಮಕ್ಕಳಿದ್ದಾಗ ನಗರದ ಬಸ್‌ ಸ್ಟ್ಯಾಂಡ್ ದೇವಸ್ಥಾನ ಒಳಗೊಂಡಂತೆ ಅನೇಕ ಕಡೆ ಕುಷ್ಠರೋಗಿಗಳನ್ನು ಕಾಣುತ್ತಿದ್ದೆವು ಜನರು ಅವರನ್ನು ಮುಟ್ಟಿಸಿಕೊಳ್ಳಲು ಹಿಂಜರಿಯುತ್ತಿದ್ದರು ಈ ಖಾಯಿಲೆಯಿಂದ ಅವರು ವೈವಾಹಿಕ ಜೀವನದಿಂದಲೇ ದೂರ ಉಳಿದಿದ್ದರು. ಇಡೀ ಸಮಾಜವೇ ಈ ರೋಗವನ್ನು ಅನಿಷ್ಠವೆಂಬಂತೆ ಕಾಣುತ್ತಿದ್ದರು ಎಂದು ತಮ್ಮ ಬಾಲ್ಯದ ನೆನಪನ್ನು ಹಂಚಿಕೊಂಡರು.
ಏಸುಕ್ರಿಸ್ತ, ಭಗವಾನ್ ಬುದ್ದ, ಮಹಾತ್ಮಾ ಗಾಂಧಿ, ಮದರ್ ತೆರೇಸಾ ಇವರೆಲ್ಲಾ ಕುಷ್ಠರೋಗವನ್ನು ಅನಿಷ್ಠವೆಂದು ಕಾಣದೆ ಸೇವೆಯನ್ನು ಮಾಡಿದವರು ಕುಷ್ಠರೋಗವು ಸ್ವರ್ಶದಿಂದ ಬರುವುದಿಲ್ಲ ಎಂದು ಅರಿತಿದ್ದ ಈ ಮಹಾನೀಯರು ತಮ್ಮ ಬದುಕಿನುದ್ದಕ್ಕೂ ಈ ರೋಗಿಗಳ ಶುಶ್ರೂಷೆ ಮಾಡುತ್ತಾ ಜೀವನ ನಡೆಸಿದರು. ಕುಷ್ಠರೋಗವನ್ನು ಹೋಗಲಾಡಿಸಬೇಕೆಂದು ಶ್ರಮಿಸುತ್ತಿರುವ ನಾವೆಲ್ಲರೂ ಇವರ ಆದರ್ಶವನ್ನು ಪಾಲನೆ ಮಾಡಬೇಕು. ಆ ನಿಟ್ಟಿನಲ್ಲಿ ನಿಮ್ಮೆಲ್ಲರ ಸಹಕಾರ ಕೂಡಾ ಬೇಕು ಎಂದರು.
ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ ಡಾ.ಶ್ರೀಧರ್ ಮಾತನಾಡಿ, ಸ್ಪರ್ಶ್ ಕುಷ್ಠರೋಗ ಜಾಗೃತಿ ಆಂದೋಲನ ಗಾಂಧೀಜಿಯವರ ಆಂದೋಲನ ನೆನಪಿಸುತ್ತಿದೆ. ಇತ್ತೀಚಿಗೆ ಕುಷ್ಠರೋಗದ ಬಗ್ಗೆ ಸಮಾಜದಲ್ಲಿ ತಪ್ಪು ಕಲ್ಪನೆ ಮೂಡಿದೆ. ಈ ರೋಗ ಪಾಪ, ಪುಣ್ಯದ ಪಿಡುಗು ಎಂದು ಭಾವಿಸಲಾಗುತ್ತಿದೆ. ಅಂತಹ ತಪ್ಪು ಕಲ್ಪನೆಯನ್ನು ಹೋಗಲಾಡಿಸೋಣ ಅದಕ್ಕೆ ಇಂತಹ ಅಭಿಯಾನಗಳು ಮುಖ್ಯವಾಗಿದೆ ಎಂದರು.
ಕುಷ್ಠರೋಗ ಸಮಾಜ ಮತ್ತು ಆರ್ಥಿಕತೆಯ ಮೇಲೆ ತುಂಬಾ ಸಮಸ್ಯೆ ಉಂಟು ಮಾಡುತ್ತಿದೆ ಈ ರೋಗ ಇದೆ ಎಂದು ಹೇಳಲು ಕೂಡ ಮುಜುಗರ ಪಡುವಂತಹ ವಾತಾವರಣ ನಿರ್ಮಾಣವಾಗಿದೆ. ಇಂತಹ ಪಿಡುಗನ್ನು ತೊಡೆದು ಹಾಕಲು ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ನಾವೆಲ್ಲಾ ಕೆಲಸ ಮಾಡಬೇಕು ಹಳ್ಳಿ ಹಳ್ಳಿಗಳಿಗು ಹೋಗಿ ಇದರ ಬಗ್ಗೆ ಅರಿವು ಮೂಡಸಬೇಕು ಭಾರತೀಯ ವೈದ್ಯಕೀಯ ಸಂಘದವರು ಈ ಪಿಡುಗನ್ನು ಹೋಗಲಾಡಿಸಲು ಸದಾ ಆರೋಗ್ಯ ಇಲಾಖೆಯ ಜೊತೆ ಕೈ ಜೋಡಿಸುತ್ತದೆ ಎಂದರು.
ಕಾರ್ಯಕ್ರದಲ್ಲಿ ಜಿಲ್ಲಾ ಕುಷ್ಠರೋಗ ನಿವಾರಣಾ ಕಾರ್ಯಕ್ರಮಧಿಕಾರಿ ಡಾ.ಎಸ್.ಕೆ. ಕಿರಣ್ ಮಾತನಾಡಿ, ಚರ್ಮದ ಮೇಲೆ ತಿಳಿಬಿಳಿ ಅಥವಾ ಕೆಂಪು ಇಲ್ಲವೇ ತಾಮ್ರ ವರ್ಣ ಸ್ಪರ್ಷಜ್ಞಾನವಿಲ್ಲದ ಮಚ್ಚೆಗಳು, ಚರ್ಮದ ಮೇಲೆ ಬೆಳವಣಿಗೆಗಳು(ಗಂಟು), ನೋವು ರಹಿತ ಹುಣ್ಣುಗಳು, ಹುಬ್ಬುಗಳು ಅಥವಾ ಕಣ್ರೆಪ್ಪೆಗಳ ನಷ್ಟ ಇವು ಕುಷ್ಠರೋಗದ ಲಕ್ಷಣಗಳಾಗಿವೆ. ಈ ರೋಗವನ್ನು ತಡೆಗಟ್ಟಲು ಮಚ್ಚೆಗಳನ್ನು ಗುಪ್ತವಾಗಿರಿಸದೇ ವೈದ್ಯರಿಗೆ ತೋರಿಸಬೇಕು. ಪ್ರಾರಂಭಿಕ ಹಂತದಲ್ಲಿ ಚಿಕಿತ್ಸೆ ಪಡೆದರೆ ಹರಡುವಿಕೆ ತಡೆಯಬಹುದು ಹಾಗೂ ಇದರಿಂದಾಗುವ ಅಂಗವೈಕಲ್ಯ ತಡೆಯಬಹುದು. ಕುಷ್ಠರೋಗದಿಂದ ಬಳಲುವವರಿಗೆ ಆರೋಗ್ಯ ಇಲಾಖೆಯಿಂದ ಶಸ್ತ್ರ ಚಿಕಿತ್ಸೆ, ಉಚಿತ ಎಂಸಿಆರ್ ಚಪ್ಪಲಿ, ಸಹಾಯಕ ಔಷಧಿಗಳನ್ನು ನೀಡಲಾಗುತ್ತದೆ ಎಂದು ಮಾಹಿತಿ ನೀಡಿದರು.

ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ ಇವರು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ “ಸ್ಪರ್ಶ್ ಕುಷ್ಠರೋಗ ಜಾಗೃತಿ ಆಂದೋಲನ – 2025” ಕಾರ್ಯಕ್ರಮದ ಪೋಸ್ಟರ್ ಹಾಗೂ ಕುಷ್ಠರೋಗ ಮಾಹಿತಿ ಕರಪತ್ರಗಳನ್ನು ಬಿಡುಗಡೆ ಮಾಡಿ, ಮಾತನಾಡಿ ಈ ಪಾಕ್ಷಿಕ ದಲ್ಲಿ ಕುಷ್ಠರೋಗದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು, ಕುಷ್ಠರೋಗಿಗಳನ್ನು ಅತೀ ಶ್ರೀರ್ಘದಲ್ಲಿ ಗುರುತಿಸಿ ಚಿಕಿತ್ಸೆಗೆ ಒಳಪಡಿಸುವುದು ಮತ್ತು ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಗಳನ್ನು ಈ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲು ಕರೆ ನೀಡಿದರು.
ಇದೇ ವೇಳೆ ಕುಷ್ಟರೊಗ ಜಾಗೃತಿ ಕುರಿತು ಸೈಕಲ್ ಜಾಥಾ ಕೈಗೊಳ್ಳಲಾಯಿತು ಹಾಗೂ ಕುಷ್ಟರೋಗ ಜಾಗೃತಿ ಆಂದೋಲನದ ಕುರಿತು ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು.
ಆರೋಗ್ಯ ಇಲಾಖೆಯ ವಿವಿಧ ಕಾರ್ಯಕ್ರಮಗಳ ಅನುಷ್ಟಾನ ಅಧಿಕಾರಿಗಳು, ಚರ್ಮರೋಗ ತಜ್ಞರಾದ ಡಾ.ದಾದಾಪೀರ್ ಮತ್ತು ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು ಹಾಗೂ ಸುಬ್ಬಯ್ಯ ಮೆಡಿಕಲ್ ಕಾಲೇಜಿನ ನರ್ಸಿಂಗ್ ವಿದ್ಯಾರ್ಥಿಗಳು ಹಾಜರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ