
ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲ್ಲೂಕಿನ ಬೇಲೂರು ಗ್ರಾಮದಲ್ಲಿ ಮುಚಿಗೇರ ಸಮುದಾಯದವರಿಂದ ಶ್ರೀ ಭರಮಲಿಂಗೇಶ್ವರ ಮೂರ್ತಿ ಪ್ರತಿಷ್ಠಾಪನೆ ಹಾಗೂ ಶ್ರೀ ಹುಲಿಗೆಮ್ಮ ದೇವಿ ಸಮುದಾಯ ಭವನದ ಉದ್ಘಾಟನಾ ಕಾರ್ಯಕ್ರಮ ಜರುಗಿತು.

ದಿ. 30/1/2025 ಗುರುವಾರ ಮುಂಜಾನೆ 9:00 ಗಂಟೆಗೆ ಶ್ರೀ ಭರಮಲಿಂಗೇಶ್ವರ ಮೂರ್ತಿಯನ್ನು ಊರಿನ ಪ್ರಮುಖ ಬೀದಿಯಲ್ಲಿ ಕುಂಭ ಹಾಗೂ ವಾದ್ಯ ಮೇಳದೊಂದಿಗೆ ಸಕಲ ಮಂಗಳ ವಾದ್ಯಗಳೊಂದಿಗೆ ಮೆರವಣಿಗೆ ಕಾರ್ಯಕ್ರಮ ಜರುಗಿತು.
ಈ ಸಂದರ್ಭದಲ್ಲಿ ಬೇಲೂರಿನ ಊರಿನ ಹಿರಿಯರು, ಯುವಕರು, ಮಹಿಳೆಯರು ಮತ್ತು ಎಲ್ಲಾ ಸಂಘಗಳ ಮುಖಂಡರು, ಅಧ್ಯಕ್ಷರು, ಕಾರ್ಯಕರ್ತರು ಹಾಗೂ ಸುತ್ತ ಮುತ್ತಲಿನ ಊರಿಂದ ಬಂದಂತಹ ಭಕ್ತಾದಿಗಳು ಕಾರ್ಯಕ್ರಮವನ್ನು ಯಶಸ್ವಿಯಾಗಿ ನೆರವೇರಿಸಿಕೊಟ್ಟರು.
ವರದಿ : ನಿಂಬಯ್ಯ ಕುಲಕರ್ಣಿ ,ಬಾದಾಮಿ
