ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಬಾಣಂತಿ ಮತ್ತು ಅಭಿಜಾತ ಶಿಶುಗಳ ಸುರಕ್ಷತೆಗೆ ಶ್ರಮಿಸಲು ವೈದ್ಯರಿಗೆ ಸೂಚನೆ : ಗುರುದತ್ತ ಹೆಗಡೆ

ಶಿವಮೊಗ್ಗ : ಜಿಲ್ಲೆಯ ಎಲ್ಲಾ ಸರಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಸಂಭವಿಸುತ್ತಿರುವ ಬಾಣಂತಿ ಮತ್ತು ಅಭಿಜಾತ ಶಿಶುಗಳ ಸಾವು-ನೋವು ನಿಯಂತ್ರಿಸುವಲ್ಲಿ ತಜ್ಞ ವೈದ್ಯಾಧಿಕಾರಿಗಳು ನಿರ್ಲಕ್ಷ್ಯ ತೋರದೇ ಮಾನವೀಯ ನೆಲೆಯಲ್ಲಿ ಸೇವೆ ಒದಗಿಸುವಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ವೈದ್ಯರಿಗೆ ಕಿವಿಮಾತು ಹೇಳಿದರು.
ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಸಲಾಗಿದ್ದ ಬಾಣಂತಿಯ ಸಾವು ಕುರಿತು ಪರಾರ‍್ಶನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ಕಳೆದ ೨೦೨೪ರ ಸೆಪ್ಟಂಬರ ಮಾಹೆಯಿಂದ ಇಂದಿನವರೆಗೆ ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ ಸುಮಾರು ೦೮ ಪ್ರಕರಣಗಳು ದಾಖಲಾಗಿರುವುದು ಅತ್ಯಂತ ನೋವಿನ ಸಂಗತಿಯಾಗಿದೆ ಎಂದ ಅವರು, ಗರ್ಭಿಣಿಯರು ಹೆರಿಗೆಯ ದಿನಕ್ಕೆ ಮುಂಚಿತವಾಗಿಯೇ ತಜ್ಞ ವೈದ್ಯರೊಂದಿಗೆ ಸಮಾಲೋಚನೆ ನಡೆಸಿ, ಅವರ ಸಲಹೆ ಪಡೆದು, ಮಾನಸಿಕವಾಗಿ ಸಿದ್ಧರಾಗಿರಬೇಕು. ಹೆರಿಗೆಯ ಕೊನೆಯ ಕ್ಷಣದವರೆಗೆ ಕಾಲಹರಣ ಮಾಡದೆ ತಾವು ಮತ್ತು ಕೂಸಿನ ಆರೋಗ್ಯ ಮತ್ತು ಸುರಕ್ಷತೆಯ ಕಡೆಗೆ ಗಮನಹರಿಸುವಂತೆ ಅವರು ಸೂಚಿಸಿದರು.
ಗಂಡಾಂತರ ಗರ್ಭಿಣಿಯರ ಆರೈಕೆ ನೋಡಿಕೊಳ್ಳುತ್ತಿರುವ ವೈದ್ಯರು ಸಾಂದರ್ಭಿಕ ಸ್ಥಿತಿಗತಿಯ ಬಗ್ಗೆ ಕಾಲಕಾಲಕ್ಕೆ ಸಲಹೆ ನೀಡಬೇಕಲ್ಲದೇ ಅಗತ್ಯವಿದ್ದಾಗ ತಜ್ಞ ವೈದ್ಯರಿಗೆ ಶಿಫಾರಸ್ಸು ಮಾಡಬೇಕು. ಇದರೊಂದಿಗೆ ವೈದ್ಯರು ಶಿಫಾರಸ್ಸು ಮಾಡುವ ವೈದ್ಯರಿಗೆ ಮುಂಚಿತವಾಗಿ ಗರ್ಭಿಣಿಯರ ಮಾಹಿತಿಯನ್ನು ನೀಡಿರಬೇಕು. ಜೊತೆಗೆ ಶುಶ್ರೂಷೆಯೊಬ್ಬರನ್ನು ಕಳುಹಿಸಿಕೊಡಬೇಕು ಎಂದವರು ಸಲಹೆ ನೀಡಿದರು.
ಅಲ್ಲದೇ ಸಂಭಾವ್ಯ ರಕ್ತಹೀನತೆ ಹಾಗೂ ಸೇವಿಸಲೇಬೇಕಾದ ಪೌಷ್ಟಿಕ ಆಹಾರದ ಕುರಿತು ಸೂಕ್ತ ಹಾಗೂ ಸಕಾಲಿಕ ಸಲಹೆ ನೀಡುವಂತೆ ಸೂಚಿಸಿದ ಅವರು, ಬಾಣಂತಿಯರು ಪ್ರತಿ ಗರ್ಭ ಧರಿಸುವುದಕ್ಕೆ ಮುನ್ನ ಕನಿಷ್ಟ ಅಂತರ ಹೊಂದಿದ್ದು, ಕಾಲಕಾಲಕ್ಕೆ ರಕ್ತದೊತ್ತಡ, ಮಧುಮೇಹ ಮುಂತಾದ ತಪಾಸಣೆಗಳನ್ನು ಮಾಡಿಸುವಂತೆ ಅವರು ಸಲಹೆ ನೀಡಿದರು.
ಕೆಲವು ಬಾಣಂತಿಯರ ಸಾವಿನ ಪ್ರಕರಣಗಳಲ್ಲಿ ವೈದ್ಯರ ನಿರ್ಲಕ್ಷ್ಯ ಇರುವ ಬಗ್ಗೆ ದೂರುಗಳಿದ್ದು, ವಾಸ್ತವ ವರದಿಯನ್ನು ಪಡೆದು ಕೂಡಲೇ ವರದಿ ನೀಡುವಂತೆ ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿ ಡಾ.ನಟರಾಜ್ಅವರಿಗೆ ಸೂಚಿಸಿದ ಅವರು, ಬಾಣಂತಿಯರ ಕೆಲವು ಸಾವಿನ ಪ್ರಕರಣಗಳಲ್ಲಿ ಕೊನೆ ಕ್ಷಣದಲ್ಲಿ ನೆರೆಯ ಜಿಲ್ಲೆಗಳಿಂದ ಶಿಫಾರಸ್ಸುಗೊಂಡ ಪ್ರಕರಣಗಳೇ ಆಗಿರುವುದು ಕಂಡುಬರುತ್ತದೆ. ಆದಾಗ್ಯೂ ವೈದ್ಯರು ಸಕಾಲಿಕವಾಗಿ ಚಿಕಿತ್ಸೆ ನೀಡುವ ಮೂಲಕ ಬಾಣಂತಿಯ ಸಾವಿನ ಪ್ರಕರಣಗಳು ನಡೆಯದಂತೆ ಕ್ರಮ ವಹಿಸಬೇಕೆಂದು ಅವರು ಸೂಚಿಸಿದರು.
ರಾಜ್ಯದಾದ್ಯಂತ ಇಂತಹ ಪ್ರಕರಣಗಳು ಅಲ್ಲಲ್ಲಿ ಕೇಳಿಬರುತ್ತಿದ್ದು, ಸರ್ಕಾರವೂ ಸಹ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದೆ. ಜಿಲ್ಲೆಯಲ್ಲಿ ಇಂತಹ ಪ್ರಕರಣಗಳು ಕಂಡುಬರದಂತೆ, ಸಕಾಲಿಕ ಚಿಕಿತ್ಸೆ ನೀಡುವ ಮೂಲಕ ತಾಯಿ ಮಗುವಿನ ಸುರಕ್ಷತೆಗೆ ವಿಶೇಷ ಕಾಳಜಿ ವಹಿಸುವಂತೆ ಅವರು ವೈದ್ಯರಿಗೆ ಸೂಚಿಸಿದರು.
ವಿಶೇಷವಾಗಿ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ಆಗಮಿಸುವ ಬಹುಸಂಖ್ಯಾತರು ಸಾಮಾನ್ಯ ಕುಟುಂಬದವರಾಗಿರುತ್ತಾರೆ. ಅಂತಹವರಿಗೆ ಸಕಾಲದಲ್ಲಿ ಚಿಕಿತ್ಸೆ ದೊರೆಯುವಂತೆ ನೋಡಿಕೊಳ್ಳಬೇಕು. ನಿಯಮಾನುಸಾರ ಹಾಗೂ ಅಗತ್ಯವಿದ್ದಲ್ಲಿ ತುರ್ತು ಚಿಕಿತ್ಸೆ ನೀಡುವಲ್ಲಿ ವೈದ್ಯಕೀಯ ಸಿಬ್ಬಂದಿ ಗಮನಹರಿಸುವಂತೆ ಅವರು ಸೂಚಿಸಿದ ಅವರು ಚಿಕಿತ್ಸೆ ನೀಡುವಲ್ಲಿ ವೈದ್ಯರಿಂದ ಯಾವುದೇ ಲೋಪಗಳಾಗದಂತೆ ನೋಡಿಕೊಳ್ಳಬೇಕು. ಚಿಕಿತ್ಸೆಗೆ ದಾಖಲಾಗುವ ಪ್ರತಿ ರೋಗಿಯ ಬಗ್ಗೆಯೂ ಇದೇ ಕಾಳಜಿ ವಹಿಸುವಂತೆ ಸಾವು ನಿಯಂತ್ರಿಸಿ, ಅಮೂಲ್ಯ ಜೀವ ಉಳಿಸುವಂತೆ ಅವರು ಸೂಚಿಸಿದರು.
ತುರ್ತು ಸಂಧರ್ಭಗಳಲ್ಲಿಗಳಲ್ಲಿ ರಕ್ತ ದೊರೆಯುವಂತೆ ಎಲ್ಲಾ ತಾಲೂಕು ಆಸ್ಪತ್ರೆಗಳ ,ಮುಖ್ಯಾಧಿಕಾರಿಗಳು ಕ್ರಮವಹಿಸಿ, ಅಲ್ಲದೇ ಉತ್ತಮ ಆರೋಗ್ಯ ಸೇವೆ ಒದಗಿಸುವಲ್ಲಿ ಅಡಚಣೆಗಳಿದ್ದಲ್ಲಿ ಕೂಡಲೇ ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿಗಳಿಗೆ ಲಿಖಿತವಾಗಿ ಮಾಹಿತಿ ನೀಡಿ, ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವಂತೆ ಅವರು ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ|| ನಟರಾಜ್, ಡಾ|| ಸಿದ್ದನಗೌಡ, ಆರ್.ಸಿ.ಹೆಚ್.ಡಾ||ಮಲ್ಲಪ್ಪ, ಡಾ|| ನಾಗರಾಜನಾಯ್ಕ್, ಡಾ|| ಸ್ಮೃತಿ, ಡಾ|| ಹೇಮಾ ಮಹೇಶ್ವರಿ ಹಾಗೂ ಎಲ್ಲಾ ತಾಲೂಕುಗಳ ಆರೋಗ್ಯಾಧಿಕಾರಿಗಳು ಉಪಸ್ಥಿತರಿದ್ದರು.

ವರದಿ : ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ