ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶ್ರೀ ಮುತ್ತು ವಡ್ಡರ ಕರುನಾಡ ಕಿರೀಟ ರಾಜ್ಯ ಪ್ರಶಸ್ತಿಗೆ ಆಯ್ಕೆ

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಹಿರೇಮಾಗಿ ಗ್ರಾಮದ ನಿವಾಸಿ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಿರೇಮಳಗಾವಿಯ ಶಿಕ್ಷಕರು ಆಗಿರುವ ಶ್ರೀ ಮುತ್ತು ವಾಯ್ ವಡ್ಡರ ಇವರು 2025 ನೇ ಸಾಲಿನ ಕರುನಾಡ ಕಿರೀಟ ರಾಜ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಕಪ್ಪತಗಿರಿ ಫೌಂಡೇಶನ್ ರಾಜ್ಯ ಘಟಕ ಗದಗ ಕಳಸಾಪುರ ಸಂಸ್ಥೆಯ, ಕಪ್ಪತಗಿರಿ ಸಾಹಿತ್ಯ ಸಾಂಸ್ಕೃತಿಕ ಕಲಾ ವೇದಿಕೆಯ ಎರಡನೇ ವಾರ್ಷಿಕೋತ್ಸವ ಹಾಗೂ ಅಪ್ಪ ಸಾಹಿತ್ಯ ವೇದಿಕೆಯ ರಾಜ್ಯ ಘಟಕ ಹತ್ತರಕಿಹಾಳ, ವಿಜಯಪುರ ವೇದಿಕೆಯ ಉದ್ಘಾಟನೆಯ ಸಮಾರಂಭದ ಪ್ರಯುಕ್ತ 2025 ನೇ ಸಾಲಿನ ಕರುನಾಡ ಕಿರೀಟ ರಾಜ್ಯ ಪ್ರಶಸ್ತಿಯನ್ನು ಶಿಕ್ಷಕರಾದ ಶ್ರೀ ಮುತ್ತು ವಡ್ಡರ ಇವರ ಶಿಕ್ಷಣ ಮತ್ತು ಸಾಹಿತ್ಯ ಕ್ಷೇತ್ರವನ್ನು ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರು ಆಗಿರುವ ಶ್ರೀಮತಿ ಚಂದ್ರಕಲಾ ಇಟಗಿಮಠ ಹಾಗೂ ಶ್ರೀಮತಿ ಸುಜ್ಞಾನಿ ನಿಂ. ಪಾಟೀಲ್ ಇವರು ತಿಳಿಸಿದ್ದಾರೆ.
ಇದೇ ದಿನಾಂಕ 2 – 2 – 2025 ರಂದು ವಿಜಯಪುರದ ಚೇತನ ಕಾಲೇಜು ಸಭಾಂಗಣದಲ್ಲಿ ನಡೆಯುವ ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಲಾಗುವುದು ಎಂದು ಕಾರ್ಯಕ್ರಮದ ಸಂಘಟಿಕರು ಹಾಗೂ ಸಂಸ್ಥಾಪಕ ಅಧ್ಯಕ್ಷರು ತಿಳಿಸಿದ್ದಾರೆ.
ವೃತ್ತಿಯಲ್ಲಿ ಶಿಕ್ಷಕರಾಗಿರುವ ಶ್ರೀ ಮುತ್ತು ವಡ್ಡರ ಇವರು ಬಿಡುವಿನ ಸಮಯದಲ್ಲಿ ಕಥೆ, ಕವನ, ಲೇಖನ ಹಾಗೂ ಇನ್ನಿತರ ಸಾಹಿತ್ಯ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ ಇವರ ಶೈಕ್ಷಣಿಕ ಸೇವೆಯನ್ನು ಮತ್ತು ಸಾಹಿತ್ಯ ಸೇವೆಯನ್ನು ಪರಿಗಣಿಸಿ ಕರುನಾಡ ಕಿರೀಟ ರಾಜ್ಯ ಪ್ರಶಸ್ತಿಗೆ ಆಯ್ಕೆ ಮಾಡಿ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಗೌರವಿಸಿ ಸನ್ಮಾನಿಸಲಾಗುವುದು ಎಂದಿದ್ದಾರೆ. ಪ್ರಶಸ್ತಿಗೆ ಆಯ್ಕೆಯಾಗಿರುವ ಶ್ರೀ ಮುತ್ತು ವಡ್ಡರ ಇವರನ್ನು ಅವರ ಸ್ನೇಹ ಬಳಗ ಹಾಗೂ ಶಿಕ್ಷಕ ಬಳಗದವರು ಮತ್ತು ಕುಟುಂಬ ವರ್ಗದವರು ಅಭಿನಂದಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ