
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ
ಶ್ರೀ ಜಿ ವಿ ಗೌಡ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸಾಂಸ್ಕೃತಿಕ ಮತ್ತು ಕ್ರೀಡಾ ಕಾರ್ಯಕ್ರಮಗಳ ಸಮಾರೋಪ ಹಾಗೂ ದ್ವಿತೀಯ ಪಿ ಯು ಸಿ ವಿದ್ಯಾರ್ಥಿಗಳಿಗೆ ಬೀಳ್ಕೋಡುಗೆ ಕಾರ್ಯಕ್ರಮವನ್ನು ಶನಿವಾರ ಆಯೋಜಿಸಲಾಗಿತ್ತು.
ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಮಂಜುನಾಥ್ ಪ್ರಸನ್ನರವರು ಕಾರ್ಯಕ್ರಮವನ್ನು ಉದ್ಘಾಟಿಸಿ ಬಳಿಕ ಮಾತನಾಡಿದರು.
ಸಮಾಜದಲ್ಲಿ ನಾಗರೀಕರಾಗಿ ಜೀವನ ನಡೆಸಬೇಕಾದರೆ ಶಿಕ್ಷಣ ಅಗತ್ಯ. ಶಿಕ್ಷಣದಿಂದ ನಮಗೆ ಎಲ್ಲಾ ಗೌರವ ಸಿಗುತ್ತದೆ ಆದರಿಂದ ವಿದ್ಯಾರ್ಥಿಗಳು ಚೆನ್ನಾಗಿ ಓದಿ ಸಮಾಜದಲ್ಲಿ ಮಾದರಿಯಾಗಬೇಕು.
ಸರ್ಕಾರಿ ಶಾಲೆ ಮತ್ತು ಕಾಲೇಜುಗಳಲ್ಲಿ ಇಂದಿಗೂ ಕೂಡ ಗುಣಮಟ್ಟ ಶಿಕ್ಷಣವನ್ನು ನೀಡಲಾಗುತ್ತದೆ. ಸಾಧಕರೆಲ್ಲರೂ ಕೂಡಾ ಸರಕಾರಿ ಶಾಲೆಯಲ್ಲಿ ವಿಧ್ಯಾಭ್ಯಾಸ ಮಾಡಿರುತ್ತಾರೆ. ಶಿಕ್ಷಣಕ್ಕೋಸ್ಕರ ಸರಕಾರ ಅನೇಕ ಸವಲತ್ತುಗಳನ್ನು ನೀಡಲಾಗಿದೆ ಇದನ್ನು ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳಬೇಕು.
ಗ್ರಾಮೀಣ ಪ್ರದೇಶದ ಬಡಮಕ್ಕಳು ಹೆಚ್ಚಾಗಿ ಸರಕಾರಿ ಶಾಲೆಯಲ್ಲಿ ಅಧ್ಯಾಯನ ಮಾಡುತ್ತಿದ್ದಾರೆ ಇಂದು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಂದ ಸರಕಾರಿ ಶಾಲೆ ಮತ್ತು ಸರಕಾರಿ ಕಾಲೇಜುಗಳು ಉಳಿದಿದೆ.
ಈ ವರ್ಷ ನಮ್ಮ ಪದವಿ ಪೂರ್ವ ಶಿಕ್ಷಣ ಇಲಾಖೆಯು ಪಿಯುಸಿ ಪರೀಕ್ಷೆಯಲ್ಲಿ 100% ಫಲಿತಾಂಶವನ್ನು ನೀಡಲು ಗುರಿ ಇಟ್ಟು ಕೊಂಡಿದೆವೆ. ನಾನು ಕೂಡ ಸರಕಾರಿ ಶಾಲೆಯಲ್ಲಿಯೇ ಓದಿದ್ದು. ಇಂದಿಗೂ ಕೂಡಾ ಕಲಿಕೆಗೆ ಉತ್ತಮವಾದ ವಾತಾವರಣ ಸರಕಾರಿ ಶಾಲೆ ಮತ್ತು ಕಾಲೇಜುಗಳಲ್ಲಿದೆ.
ಉತ್ತಮ ದರ್ಜೆಯಲ್ಲಿ ವಿದ್ಯಾರ್ಥಿಗಳು ಉತ್ತೀರ್ಣರಾಗಬೇಕು ನಿಮ್ಮ ಮುಂದಿನ ವಿದ್ಯಾಭ್ಯಾಸ ಉತ್ತಮವಾಗಿರಲಿ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಪ್ರಾಂಶುಪಾಲರಾದ ಲಾಜರಸ್, ಉಪನ್ಯಾಸಕರಾದ ನಂಜುಂಡಯ್ಯ, ಶಿವಕುಮಾರ್, ಫರ್ಹಾನಾ ಬೇಗಂ, ಕುಸುಮ, ಸವಿತ, ಹರೀಶ್, ಮಹೇಂದ್ರ, ದೇವಿಕಾ, ಸುಮತಿ, ಚೈತ್ರ, ನಂದಿನಿ, ನರ್ಮದಾ, ಹಾಗೂ ಸಿಬ್ಬಂದಿಗಳಾದ ಪ್ರಭು, ನಂಜುಂಡಸ್ವಾಮಿ, ಮೂರ್ತಿ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.
ವರದಿ : ಉಸ್ಮಾನ್ ಖಾನ್
