ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಉಪ ಅರಣ್ಯ ಸಂರಕ್ಷಣಾ ಅಧಿಕಾರಿಗಳಿಂದ ವನಸಿರಿ ಅಮರೇಗೌಡ ಮಲ್ಲಾಪುರ ಅವರಿಗೆ ಪ್ರಶಂಸನೀಯ ಪತ್ರ

ರಾಯಚೂರು ಜಿಲ್ಲೆಯಾದ್ಯಂತ ಪರಿಸರ ಚಟುವಟಿಕೆಗಳನ್ನು ಕೈಗೊಂಡು ಶಾಲಾ ಆವರಣ, ಸಂಘ ಸಂಸ್ಥೆಗಳು ಮತ್ತು ಇತರೆ ಸಾರ್ವಜನಿಕ ಪ್ರದೇಶಗಳಲ್ಲಿ ಹೆಚ್ಚಿನ ಗಿಡಗಳನ್ನು ನೆಟ್ಟು ಸಾರ್ವಜನಿಕರಲ್ಲಿ ಪರಿಸರ ಜಾಗೃತಿ ಮೂಡಿಸಿ ಪರಿಸರ ಸಮತೋಲನ ಕಾಪಾಡುವಲ್ಲಿ ಹೆಚ್ಚಿನ ಶ್ರಮವಹಿಸಿರುವುದು ಕಂಡುಬದಿರುತ್ತದೆ. ಅರಣ್ಯ ಇಲಾಖೆಯ ಕಾರ್ಯಕ್ರಮಗಳಾದ ಕೃಷಿ ಅರಣ್ಯ ಕಾಮಗಾರಿಗಳ ಕುರಿತು ಇಲಾಖೆ ಅಧಿಕಾರಿಗಳ ಸಂಪರ್ಕದೊಂದಿಗೆ ರೈತ ಬಾಂಧವರಿಗೆ ಹೆಚ್ಚಿನ ಮನವರಿಕೆ ಮಾಡಿಕೊಟ್ಟು ಹೆಚ್ಚು ಹೆಚ್ಚು ಕೃಷಿ ಅರಣ್ಯ ಕಾಮಗಾರಿಗಳನ್ನು ಕೈಗೊಂಡಿರುವುದರಲ್ಲಿ ವನಸಿರಿ ಅಮರೇಗೌಡ ಮಲ್ಲಾಪುರ ಅವರ ಪಾತ್ರ ಶ್ಲಾಘನೀಯವಾಗಿರುತ್ತದೆ. ಈ ರೀತಿಯಾಗಿ ಕಾರ್ಯ ಪ್ರವೃತ್ತರಾಗಿರುವುದು ಕಂಡು ಬಂದಿರುತ್ತದೆ. ಆದುದರಿಂದ ಇವರ ಕಾರ್ಯಕ್ಕೆ ಅರಣ್ಯ ಇಲಾಖೆ ವತಿಯಿಂದ ಅಭಿನಂದನೆಗಳನ್ನು ಸಲ್ಲಿಸುವ ಮೂಲಕ ಈ ಪ್ರಶಂಸನೀಯ ಪತ್ರ ನೀಡಿ ಗೌರವಿಸಲಾಗುವುದು ಎಂದು ರಾಯಚೂರು ಉಪ ಸಾಮಾಜಿಕ ಅರಣ್ಯ ವಿಭಾಗದ ಸಂರಕ್ಷಣಾ ಅಧಿಕಾರಿಗಳಾದ ಸುರೇಶ ಬಾಬು ಅವರು ರಾಯಚೂರಿನ ಉಪ ಅರಣ್ಯ ಸಂರಕ್ಷಣಾ ಅಧಿಕಾರಿಗಳ ಕಛೇರಿಯಲ್ಲಿ ವನಸಿರಿ ಪೌಂಡೇಷನ್ ರಾಜ್ಯಾಧ್ಯಕ್ಷರಾದ ಅಮರೇಗೌಡ ಮಲ್ಲಾಪುರ ಹಾಗೂ ಅವರ ತಂಡದ ಸದಸ್ಯರಿಗೆ ಪ್ರಶಂಸನೀಯ ಪತ್ರ ನೀಡಿ ಗೌರವಿಸಿ ಅಭಿನಂದಿಸಿದರು.

ಈ ಸಂಧರ್ಭದಲ್ಲಿ ಉಪ ಅರಣ್ಯ ಸಂರಕ್ಷಣಾ ಅಧಿಕಾರಿಗಳಾದ ರಮೇಶ ಬಾಬು,ವನಸಿರಿ ತಂಡದ ಸದಸ್ಯರಾದ ಶಂಕರಗೌಡ ಎಲೆಕೊಡ್ಲಿಗಿ,ಗಿರಿಸ್ವಾಮಿ ಹೆಡಗಿನಾಳ,ರಾಯಚೂರ ಸಾಮಾಜಿಕ ಅರಣ್ಯ ಇಲಾಖೆ ನಾಗರಾಜ ಇದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!