ಬಾಗಲಕೋಟೆ /ರಬಕವಿ – ಬನಹಟ್ಟಿ :
ಕರ್ನಾಟಕ ರಾಜ್ಯ ಭಾಷಾ ಅಲ್ಪಸಂಖ್ಯಾತ ಶಾಲಾ ಶಿಕ್ಷಕರ ಕ್ಷೇಮಾಭಿವೃದ್ಧಿ ಸಂಘ ಬೆಂಗಳೂರು (ರಿ.), ತಾಲೂಕ ಘಟಕ ರಬಕವಿ-ಬನಹಟ್ಟಿಯ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ವಿವಿಧ ಸಂಘಟನೆಗಳ ಪದಾಧಿಕಾರಿಗಳ ಹಾಗೂ ಸಾಧಕರಿಗೆ
ಸನ್ಮಾನ ಸಮಾರಂಭ.
ಅವಳಿ ನಗರಗಳು ಜವಳಿಗೆ ಪ್ರಸಿದ್ಧಿ ಪಡೆದು , ಈಗ ಶಿಕ್ಷಣ ಕ್ಷೇತ್ರದಲ್ಲಿ ತನ್ನದೇ ಚಾಪು ಮೂಡಿಸುತ್ತಿರುವ ಬನಹಟ್ಟಿ ನಗರದಲ್ಲಿ ಕರ್ನಾಟಕ ರಾಜ್ಯ ಭಾಷಾ ಅಲ್ಪಸಂಖ್ಯಾತ ಶಾಲಾ ಶಿಕ್ಷಕರ ಕ್ಷೇಮಾಭಿವೃದ್ಧಿ ಸಂಘ ಬೆಂಗಳೂರು (ರಿ.) ತಾಲೂಕ ಘಟಕ ರಬಕವಿ-ಬನಹಟ್ಟಿಯ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾ ಹಾಗೂ ತಾಲೂಕಾ ಪದಾಧಿಕಾರಿಗಳ ಮತ್ತು ವೃಂದ ಸಂಘಗಳ ಅಧ್ಯಕ್ಷರಗಳು ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ನಗರದ ಅಂಜುಮನ್ ಇಸ್ಲಾಂ ಸಂಸ್ಥೆಯ ಅವರಣದಲ್ಲಿ ಸೋಮವಾರ ದಿ. 10/02/2025 ರಂದು ಸಂಜೆ 5:30 ಘಂಟೆಗೆ ಹಮ್ಮಿಕೊಳ್ಳಲಾಗಿದೆ. ಈ ಸದರಿ ಕಾರ್ಯಕ್ರಮಕ್ಕೆ ತೇರದಾಳ ಮತ ಕ್ಷೇತ್ರದ ಜನಪ್ರಿಯ ಶಾಸಕರಾದ ಮಾನ್ಯ ಶ್ರೀ ಸಿದ್ದು .ಕ.ಸವದಿ ರವರು ಭಾಗವಹಿಲಿದ್ದಾರೆ ಎಂದು ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
