ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕುಳಗೇರಿ ಕ್ರಾಸ್ ನ ಶ್ರೀ ವೀರಪುಲಕೇಶಿ ವಿದ್ಯಾವರ್ಧಕ ಸಂಸ್ಥೆ ಸ್ವತಂತ್ರ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಪಿ.ಯು.ಸಿ ದ್ವಿತೀಯ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ನಡೆಯಿತು. ಶ್ರೀ ವೀರಪುಲಕೇಶಿ ವಿದ್ಯಾವರ್ಧಕ ಸಂಸ್ಥೆಯ ಸ್ವತಂತ್ರ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿಗಳನ್ನು ಬೀಳ್ಕೊಡುವ ಮೊದಲು ದೀಪವನ್ನು ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ದೇಶಿಸಿ ಅಧ್ಯಕ್ಷರಾದ ವಿ.ಎಸ್.ಮಿಟ್ಲಕೋಡ ಇವರು ಮಾತನಾಡಿದರು ಮಕ್ಕಳಿಗೆ ಆಸ್ತಿ ಮಾಡುವ ಬದಲಿಗೆ ಉತ್ತಮ ಶಿಕ್ಷಣ ಕೊಡಿಸಿ ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡಿ ಎಂದು ಹೇಳಿದರು.
ಈ ಸಂದರ್ಭದಲ್ಲಿ ಅಧ್ಯಕ್ಷತೆಯನ್ನು ವಿ.ಎಸ್.ಮಿಟ್ಲಕೋಡ ( ಚೇರಮನ್ನರು ಶಾಲಾ ಸುಧಾರಣ ಸಮಿತಿ ಕುಳಗೇರಿ ಕ್ರಾಸ್ ) ವಹಿಸಿದ್ದರು. ಉದ್ಘಾಟನೆಯನ್ನು ಶ್ರೀ.ಎ . ಆರ್. ಕಲ್ಯಾಣಶೆಟ್ಟಿ ಅಧ್ಯಕ್ಷರು ಶ್ರೀ.ವೀರಪುಲಕೇಶಿ ವಿದ್ಯಾವರ್ಧಕ ಸಂಸ್ಥೆ ಬಾದಾಮಿ ನೆರವೇರಿಸಿದರು.
ಈ ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಗಳು, ಬಹುಮಾನ ವಿತರಕರು, ಶಾಲಾ ಸಿಬ್ಬಂದಿ ವರ್ಗದ
ಶ್ರೀ ಎಸ್.ಎಸ್.ಮೇಟಿ (ಪ್ರಾಚಾರ್ಯರು), ಶಿಕ್ಷಕ ಶಿಕ್ಷಕಿಯರು ಮತ್ತು ವಿದ್ಯಾರ್ಥಿ ವಿದ್ಯಾರ್ಥಿನಿಯರು ಭಾಗವಹಿಸಿದ್ದರು.
ವರದಿ : ನಿಂಬಯ್ಯ ಕುಲಕರ್ಣಿ ,ಬಾದಾಮಿ
