ಬಾಗಲಕೋಟೆ: ಇದೇ ಫೆಬ್ರುವರಿ 7 ರಂದು ಮಹಾರಾಷ್ಟ್ರದ ಸಾಂಗ್ಲಿಯಲ್ಲಿ 4 ವರ್ಷದ ಮಿಸ್ಬಾ ಎಂಬ ಪುಟ್ಟ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಮಾಡಿರುವ ಘಟನೆಯನ್ನು ತೀವ್ರವಾಗಿ ಖಂಡಿಸಿ ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಬಾಗಲಕೋಟೆಯಲ್ಲಿ ಎಸ್.ಡಿ.ಪಿ.ಆಯ್ ಮತ್ತು ಕರ್ನಾಟಕ ರಾಜ್ಯ ಟಿಪ್ಪು ಸುಲ್ತಾನ್ ಅಭಿಮಾನಿಗಳ ಮಹಾ ವೇದಿಕೆಯಿಂದ ಬಾಗಲಕೋಟೆ ಅಪರ ಜಿಲ್ಲಾಧಿಕಾರಿಯವರ ಮೂಲಕ ಮಾನ್ಯ ರಾಷ್ಟಪತಿಗಳಿಗೆ ಮನವಿ ಸಲ್ಲಿಸಲಾಯಿತು.
ಮುಂದೆ ಈ ತರಹದ ಘಟನೆಗಳು ಮತ್ತೆ ಮರುಕಳಿಸದಂತೆ ಕೇಂದ್ರ ಸರ್ಕಾರ ಇಂತಹ ಆರೋಪಿಗಳಿಗೆ ಗಲ್ಲು ಶಿಕ್ಷೆ ನೀಡಲು ಕಾನೂನು ರೂಪಿಸುವಂತೆ ಮತ್ತು ಬಾಲಕಿಯ ಸಾವಿಗೆ ನ್ಯಾಯ ಒದಗಿಸಿ ಬಾಲಕಿ ಕುಟುಂಬಕ್ಕೆ ಪರಿಹಾರ ಘೋಷಿಸುವಂತೆ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಅಬ್ದುಲ್ ಗಫ್ಫಾರ್ ಕೊರ್ತಿ, ಅಲ್ತಾಫ್ ಮದರಿ,ತೌಫಿಕ್ ಪುಣೇಕರ್, ಎಂ.ಎಸ್ ದೇಗಿನಾಳ,ಎಂ.ಎಂ ನದಾಫ್ ಮತ್ತಿತರರು ಉಪಸ್ಥಿತರಿದ್ದರು.
