ಚಾಮರಾಜನಗರ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಫೆಬ್ರವರಿ 16 ರಂದು ಚಾಮರಾಜನಗರ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ನಿಗದಿಯಾಗಿದ್ದ ಜಿಲ್ಲೆಯ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳ ಬೃಹತ್ ಸಮಾವೇಶ ಮತ್ತು ಜಿಲ್ಲಾ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ/ಉದ್ಘಾಟನೆ ಕಾರ್ಯಕ್ರಮ ಹಾಗೂ ಫೆಬ್ರವರಿ 17 ರಂದು ಮಲೆ ಮಹದೇಶ್ವರ ಬೆಟ್ಟದಲ್ಲಿ ನಿಗದಿಯಾಗಿದ್ದ ಸಚಿವ ಸಂಪುಟ ಸಭೆಯನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ. ಮುಂದಿನ ದಿನಾಂಕವನ್ನು ನಂತರದಲ್ಲಿ ತಿಳಿಸಲಾಗುವುದು ಎಂದು ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರದಿ :ಉಸ್ಮಾನ್ ಖಾನ್
