ಚಾಮರಾಜನಗರ/ ಹನೂರು : ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಹನೂರು ಉಪ ವಿಭಾಗ ವ್ಯಾಪ್ತಿಯ ಮಹದೇಶ್ವರ ಬೆಟ್ಟ ಶಾಖಾ ವ್ಯಾಪ್ತಿಯಲ್ಲಿ ಫೆ.13 ಮತ್ತು 14 ರಂದು ವಿದ್ಯುತ್ ವ್ಯತ್ಯಯವಾಗಲಿದೆ.
ವಿದ್ಯುತ್ ಪರಿವರ್ತಕಗಳ ನಿರ್ವಹಣೆ ಮತ್ತು ಜಂಗಲ್ ಕಟಿಂಗ್ ಕಾರ್ಯ ಹಮ್ಮಿಕೊಂಡಿರುವುದರಿಂದ ಆ ಎರಡು ದಿನಗಳು ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಶಂಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೌದಳ್ಳಿ 66/11 ಕೆವಿ ವಿದ್ಯುತ್ ಸರಬರಾಜು ವಿತರಣಾ ಕೇಂದ್ರದಿಂದ ಹೊರ ಬರುವ ಮಹದೇಶ್ವರಬೆಟ್ಟ ಬಿದರಳ್ಳಿ ಫೀಡರ್ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಾದ ಮಹದೇಶ್ವರಬೆಟ್ಟ ವಡಕೆಹಳ್ಳ ಪೊನ್ನಾಚಿ ಗೋಪಿನಾಥಂ ಹಾಗೂ ಮೇಲ್ಕಂಡ ಫೀಡರ್ ಗಳ ಇನ್ನಿತರ ಗ್ರಾಮಗಳಲ್ಲಿ ನಾಳೆ ಮತ್ತು ನಾಡಿದ್ದು, ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆ ವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಹಾಗಾಗಿ ಗ್ರಾಹಕರು, ಸಾರ್ವಜನಿಕರು ಸಹಕರಿಸಬೇಕು ಎಂದು ಪ್ರಕಟಣೆಯಲ್ಲಿ ಕೋರಲಾಗಿದೆ.
ವರದಿ ಉಸ್ಮಾನ್ ಖಾನ್
