ಬೆಂಗಳೂರಿನಲ್ಲಿ ಗುರುವಾರ ಕೆ ಬಿ ಜೆ ಎನ್ ಎಲ್ ವ್ಯವಸ್ಥಾಪಕ ನಿರ್ದೇಶಕ ಮೋಹನರಾಜ್ ಅವರಿಗೆ ವಿವಿಧ ಬೇಡಿಕೆಗಳ ಮನವಿ ಸಲ್ಲಿಸಿ ಬರಲಿರುವ ಬಜೆಟ್ ನಲ್ಲಿ ಅನುದಾನ ಮೀಸಲಿರಿಸಲು ಪ್ರಸ್ತಾವನೆ
ಸಿದ್ಧಪಡಿಸಬೇಕು ಎಂದು ಮನವಿ ಸಲ್ಲಿಸಲಾಯಿತು.
ಬಾಗಲಕೋಟೆ / ಆಲಮಟ್ಟಿ ಜಲಾಶಯದ ಹಿನ್ನೀರಿನಲ್ಲಿ ಮುಳುಗಡೆಯಾದ ಬಾಗಲಕೋಟೆ ನಗರ, ಹಲವು ಸಮಸ್ಯೆ ಎದುರಿಸುತ್ತಿದೆ. ಇಲ್ಲಿನ ವ್ಯಾಪಾರ-ವಹಿವಾಟಿಗೆ ಅನುಕೂಲ ಕಲ್ಪಿಸುವ ಜತೆಗೆ ಪ್ರವಾಸೋದ್ಯಮ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳಿವೆ. ಬಾಗಲಕೋಟೆ ಸುತ್ತಲಿನ ಹಿನ್ನೀರಿನಲ್ಲಿ ಬೋಟಿಂಗ್ ವ್ಯವಸ್ಥೆ ಕಲ್ಪಿಸಿ, ಆ ಮೂಲಕ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲು ಸಮಗ್ರ ಯೋಜನಾ ವರದಿ ಸಿದ್ಧಪಡಿಸಬೇಕು ಎಂದು ಬಿಟಿಡಿಎ ಅಧ್ಯಕ್ಷರೂ ಆಗಿರುವ ಶಾಸಕ ಎಚ್.ವೈ. ಮೇಟಿ ಒತ್ತಾಯಿಸಿದರು. ಈ ಸಂದರ್ಭದಲ್ಲಿ ಅವರ ಆಪ್ತ ಕಾರ್ಯದರ್ಶಿಯೂ ಹಾಗೂ ಹೊಳೆಬಸು ಶೆಟ್ಟರ್ ಜೊತೆಗಿದ್ದರು.
ವರದಿ : ಅಬ್ದುಲಸಾಬ ನಾಯ್ಕರ
