ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಮಾಹಿತಿ ಹಕ್ಕು ಮತ್ತು ಕಾನೂನು ಅರಿವು ಕಾರ್ಯಾಗಾರ

ರಾಯಚೂರು: ರಾಜ್ಯದಲ್ಲಿ ಭ್ರಷ್ಟಾಚಾರದ ವಿರುದ್ಧ ನಿರಂತರವಾಗಿ ಹೋರಾಡುತ್ತಾ ಬಂದಿರುವ ಲಂಚಮುಕ್ತ ಕರ್ನಾಟಕ ನಿರ್ಮಾಣ ವೇದಿಕೆ (ರಿ.) ಯು ನಾಡಿನ ಜನರನ್ನು ಸಬಲೀಕರಣ ಕಾರ್ಯದಲ್ಲೂ ನಿರತವಾಗಿದೆ. ಜನರಿಗೆ ಅವರ ಹಕ್ಕುಗಳು ಮತ್ತು ಕಾನೂನನ್ನು ತಮ್ಮ ಸಂವಿಧಾನಬದ್ಧ ರಕ್ಷಣೆ ಹಾಗೂ ಸರ್ಕಾರಿ ಕೆಲಸ ಮಾಡಿಸಿಕೊಳ್ಳುವಲ್ಲಿ ಹೇಗೆ ಬಳಸಿಕೊಳ್ಳಬಹುದೆಂಬ ವಿಚಾರಗಳನ್ನು ತಿಳಿಸುತ್ತಾ ನೆರವಾಗುತ್ತಾ ಬಂದಿದೆ.
ಈ ನಿಟ್ಟಿನಲ್ಲಿ ವೇದಿಕೆಯು ರಾಜ್ಯಾದ್ಯಂತ ಮಾಹಿತಿ ಹಕ್ಕು ಕಾಯ್ದೆ, ಸಕಾಲ ಮತ್ತು ಕಾನೂನು ಅರಿವು, ತರಬೇತಿ ಶಿಬಿರ/ ಕಾರ್ಯಾಗಾರಗಳನ್ನು ನಡೆಸಿಕೊಂಡು ಬರುತ್ತಿದೆ ಮತ್ತು ಮುಂದಿನ ತಿಂಗಳುಗಳಲ್ಲಿ ಬೇರೆ ಬೇರೆ ಜಿಲ್ಲೆಗಳಲ್ಲಿಯೂ ಈ ರೀತಿಯ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ.

ಈ ರೀತಿಯ ಕಾರ್ಯಕ್ರಮದ ಅಂಗವಾಗಿ ಇದೇ ಫೆಬ್ರವರಿ 15ರ ಶನಿವಾರದಂದು ರಾಯಚೂರಿನಲ್ಲಿ ಲಂಚಮುಕ್ತ ಕರ್ನಾಟಕ ನಿರ್ಮಾಣ ವೇದಿಕೆಯ ವತಿಯಿಂದ ಭ್ರಷ್ಟಾಚಾರ ಮತ್ತು ಪ್ರಜಾಪ್ರಭುತ್ವ ಕುರಿತ ವಿಚಾರ ಸಂಕಿರಣ, ಮಾಹಿತಿ ಹಕ್ಕು ಕಾಯ್ದೆ ಮತ್ತು ಕಾನೂನು ಅರಿವು ಕಾರ್ಯಾಗಾರ ಹಾಗೂ ನಾಡಪ್ರೇಮಿ ಹೋರಾಟಗಾರರಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

ಈ ಕಾರ್ಯಕ್ರಮವು ರಾಯಚೂರಿನ ಅಂಬೇಡ್ಕರ್ ವೃತ್ತದ ಸಮೀಪವಿರುವ ಕರ್ನಾಟಕ ರಾಜ್ಯ ನೌಕರರ ಭವನದಲ್ಲಿ ಬೆಳಗ್ಗೆ ಗಂಟೆ 10:30 ರಿಂದ ಸಂಜೆ 4:30ರ ತನಕ ನಡೆಯಲಿದೆ. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ನಾಡಿನ ಹಿರಿಯ ಹೋರಾಟಗಾರರು ಮತ್ತು ಚಿಂತಕರಾದ ಎಸ್. ಆರ್. ಹಿರೇಮಠ್ ಅವರು ಆಗಮಿಸುತ್ತಿದ್ದಾರೆ. ಕಾರ್ಯಕ್ರಮದ ಉದ್ಘಾಟನೆಯನ್ನು ವೇದಿಕೆಯ ಗೌರವಾಧ್ಯಕ್ಷರಾದ ರವಿ ಕೃಷ್ಣಾರೆಡ್ಡಿ ಅವರು ನೆರವೇರಿಸಲಿದ್ದಾರೆ. ಈ ಸಂದರ್ಭದಲ್ಲಿ ನಾಡಿನ ಹಿರಿಯ ಸಾಮಾಜಿಕ ಹೋರಾಟಗಾರರಾದ ಶ್ರೀ ರಾಘವೇಂದ್ರ ಕುಷ್ಟಗಿ ಅವರನ್ನು ಸನ್ಮಾನಿಸಲಾಗುವುದು ಎಂದು ನಿರುಪಾದಿ ಕೆ ಗೋಮರ್ಸಿ ,ಕಾರ್ಯಕಾರಿ ಸಮಿತಿ ಸದಸ್ಯರು
ಲಂಚಮುಕ್ತ ಕರ್ನಾಟಕ ನಿರ್ಮಾಣ ವೇದಿಕೆ (ರಿ.) ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ