ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಲೋಕಿಕೆರೆ ವಿವಿಧ ಗ್ರಾಮಗಳ ಕಾಮಗಾರಿ ಭೂಮಿ ಪೂಜೆಯನ್ನು ಶಾಸಕರಾದ ಎನ್.ಟಿ ಶ್ರೀನಿವಾಸ್ ನೆರವೇರಿಸಿ ನಂತರ
ಲೋಕಿಕೆರೆ ಗ್ರಾಮದ ಎಸ್ ಸಿ ಕಾಲೋನಿಯಲ್ಲಿ ಸಿಸಿ ರಸ್ತೆ & ಚರಂಡಿ ನಿರ್ಮಾಣ ( 35 ಲಕ್ಷಗಳು )
ತಾಯಕನಹಳ್ಳಿಯಿಂದ ಹುಡೇಂ ಗ್ರಾಮದವರೆಗೆ ರಸ್ತೆ ಅಗಲೀಕರಣ ಹಾಗೂ ಅಭಿವೃದ್ಧಿಪಡಿಸುವುದು ( 8 ಕೋಟಿ 7 ಲಕ್ಷಗಳು )
ಲೋಕಿಕೆರೆ ಗ್ರಾಮದ ನೂತನ ಅಂಗನವಾಡಿ ಕೇಂದ್ರ ಉದ್ಘಾಟನೆ ಮಾಡಿದರು, ಅಂಗನವಾಡಿ ಕೇಂದ್ರಗಳಲ್ಲಿ ಮಹಿಳೆಯರಿಗೆ ಹಾಗೂ ಬಾಣಂತಿಯರಾದಂತಹ ಅವರಿಗೆ ಸರಿಯಾದ ರೀತಿಯಲ್ಲಿ ಆಹಾರ ಹಾಗೂ ಪೌಷ್ಟಿಕಾಂಶಗಳನ್ನು ಒಳಗೊಂಡಿರುವ ಆಹಾರವನ್ನು ಸರಿಯಾದ ರೀತಿಯಲ್ಲಿ ಅವರಿಗೆ ಕೊಡಬೇಕು ಹಾಗೂ ಯಾವುದೇ ಸಮಸ್ಯೆಗಳ ಬಂದಂತ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಗಮನಕ್ಕೆ ತನ್ನಿ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳಿ ಯಾವುದೇ ರೀತಿ ಮಕ್ಕಳಿಗೆ ಮೂಲಭೂತ ಸೌಕರ್ಯಗಳ ಬಗ್ಗೆ ಹಾಗೂ ಪೌಷ್ಟಿಕ ಆಹಾರದ ಕೊರತೆ ಕಂಡು ಬಂದಲ್ಲಿ ಅವರಿಗೆ ಸರಿಯಾದ ಕಾನೂನು ಕ್ರಮ ಜರುಗಿಸಲಾಗುತ್ತದೆ ಇನ್ನು ಮಾತನಾಡುತ್ತಾ ಅಲ್ಲಿನ ಜನಗಳ ಮೂಲಭೂತ ಸೌಕರ್ಯಗಳನ್ನು ಆರೋಗ್ಯವನ್ನು ವಿಚಾರಸುತ್ತಾ ಆಲಿಸುತ್ತಾ ಅಹವಾಲನ್ನು ಸ್ವೀಕರಿಸುತ್ತಾ ಯಾವುದೇ ಕುಂದು ಕೊರತೆಗಳು ಕಂಡು ಬಂದರೆ ಸಂಬಂಧಪಟ್ಟ ಇಲಾಖೆಗೆ ತಿಳಿಸಿ ಆದಷ್ಟು ನಾವು ಅದನ್ನು ಪರಿಹರಿಸಲು ಪ್ರಯತ್ನ ಪಡುತ್ತೇವೆ ಎಂದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರು, ಸದಸ್ಯರು, ಲೋಕಿಕೆರೆ, ತಾಯಕನಹಳ್ಳಿ, ಹುಡೇಂ ಗ್ರಾಮದ ಪ್ರಮುಖ ಮುಖಂಡರು ಉಪಸ್ಥಿತರಿದ್ದರು.
ವರದಿ : ಗುರುರಾಜ್ ಎಲ್, ಕಲ್ಲಹಳ್ಳಿ ಟಿ
