ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಜಿಲ್ಲಾಧಿಕಾರಿಗಳಿಗೆ ನ್ಯಾಯಾಂಗ ಅಧಿಕಾರ ನೀಡುವುದು – ಇದು ಸಂಪೂರ್ಣವಾಗಿ ಅನ್ಯಾಯಕರ ಮತ್ತು ಸಂವಿಧಾನ ವಿರೋಧಿ

ವಕ್ಫ್ ತಿದ್ದುಪಡಿ ಬಿಲ್ ನ ಪ್ರತಿಯನ್ನು ಹರಿದು ಪ್ರತಿಭಟನೆ

ಬಾಗಲಕೋಟೆ : ರಾಜ್ಯಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ 2024 ಮಂಡನೆಯನ್ನು ವಿರೋಧಿಸಿ ಸೋಷಿಯಲ್ ಡೆಮೊಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಬಾಗಲಕೋಟೆ ಸಮಿತಿ ವತಿಯಿಂದ ಎಸ್‌ಡಿಪಿಐ ಬಾಗಲಕೋಟೆ ವಿಧಾನಸಭಾ ಕ್ಷೇತ್ರ ಅಧ್ಯಕ್ಷರಾದ ಕಾಸಿಂ ಗೊಳಸಂಗಿ ಯವರ ನೇತೃತ್ವದಲ್ಲಿ ನಗರದ ಬಸವೇಶ್ವರ ಸರ್ಕಲ್ ನಲ್ಲಿ ಬಿಲ್ ನ ಪ್ರತಿಯನ್ನು ಹರಿಯುವ ಮುಖಾಂತರ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಎಸ್ ಡಿ ಪಿ ಐ ಅಧ್ಯಕ್ಷರಾದ ಕಾಸಿಂ ಗೊಳಸಂಗಿ ಈ ಮಸೂದೆಗೆ ತೀವ್ರವಾಗಿ ವಿರೋಧ ವ್ಯಕ್ತಪಡಿಸಿ ಈ ಮಸೂದೆ ಅಸಾಂವಿಧಾನಿಕ ಮಾತ್ರವಲ್ಲದೇ ವಕ್ಫ್ ಸಂಪತ್ತನ್ನು ಕಬಳಿಸುವ ಕೋಮುವಾದಿ ಸರ್ಕಾರದ ಹುನ್ನಾರ ಜಿಲ್ಲಾಧಿಕಾರಿಗಳಿಗೆ ನ್ಯಾಯಾಂಗ ಅಧಿಕಾರ ನೀಡುವುದು – ಇದು ಸಂಪೂರ್ಣವಾಗಿ ಅನ್ಯಾಯಕರ ಮತ್ತು ಸಂವಿಧಾನ ವಿರೋಧಿ ಈ ಮಸೂದೆಯನ್ನು ಹಿಂದಕ್ಕೆ ತೆಗೆದುಕೊಳ್ಳದಿದ್ದರೆ, ದೇಶದಾದ್ಯಂತ CAA, NRC ಮಾದರಿಯ ಭಾರಿ ಪ್ರತಿಭಟನೆಗಳು ನಡೆಯಲಿವೆ ಎಂದು ಒಕ್ಕೂಟ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಮುಂದುವರಿದು ಮಾತನಾಡಿದ ಅವರು ನಾವು ಇಂದು ಇಲ್ಲಿ ಸೇರಿರುವುದು ಭಾರತದ ಮುಸ್ಲಿಂ ಸಮುದಾಯದ ಸಂವಿಧಾನಿಕ ಹಕ್ಕುಗಳು ಮತ್ತು ವಕ್ಫ್ ಆಸ್ತಿಗಳ ರಕ್ಷಿಸುವ ಬಗ್ಗೆ ಅಲ್ಲ ಮೋದಿ ಸರ್ಕಾರ ಈ ಮಸೂದೆಯ ಮೂಲಕ ವಕ್ಫ್ ಬೋರ್ಡ್‌ ಮೇಲೆ ಹಿಂದೂತ್ವ ಆದರ್ಶಗಳನ್ನು ಹೇರಲು ಯತ್ನಿಸುತ್ತಿದೆ, ಇದು ಧಾರ್ಮಿಕ ಸ್ವಾತಂತ್ರ್ಯ ಮತ್ತು ಸ್ವಾಯತ್ತತೆಗೆ ವಿರುದ್ಧವಾದದ್ದು ಎಂದು ಅಭಿಪ್ರಾಯಪಟ್ಟರು.

ತಿದ್ದುಪಡಿಯ ಹಿಂದಿನ ಅಸಲಿ ಉದ್ದೇಶ
• ವಕ್ಫ್ ಕಾಯ್ದೆಯ ಅನುಷ್ಠಾನವನ್ನು BJP ತನ್ನ ಬಹುಮತದ ಬಲದಿಂದ ದುರುಪಯೋಗಪಡಿಸಿಕೊಂಡು ದೇಶವನ್ನು ಕೇಸರಿ ಬಣ್ಣದಿಂದ ಮುಚ್ಚಲು ಪ್ರಯತ್ನಿಸುತ್ತಿದೆ.
• ಈ ಮಸೂದೆ ಮುಸ್ಲಿಂ ಸಮುದಾಯದ ಹಕ್ಕುಗಳ ಮೇಲೆ ನೇರ ದಾಳಿ, ಹಾಗೆಯೇ ವಕ್ಫ್ ಸಂಸ್ಥೆಗಳ ಶಕ್ತಿಯನ್ನು ಕುಂದಿಸುತ್ತಿವೆ.
• ಈಗಿನ ಕಾನೂನುಗಳು ಹಿಂದೂ ಧಾರ್ಮಿಕ ಆಸ್ತಿಗಳನ್ನು ಹಿಂದೂ ಅಲ್ಲದವರಿಂದ ನಿರ್ವಹಿಸುವಂತಾಗಲು ನಿರ್ಬಂಧಿಸುತ್ತವೆ. ಆದರೆ ಹೊಸ ವಕ್ಫ್ ಮಸೂದೆಯಡಿಯಲ್ಲಿ, ವಕ್ಫ್ ಬೋರ್ಡ್ ಸದಸ್ಯರ ಬಹುಪಾಲು—ಸಿಇಒ ಸಹ ಮುಸ್ಲಿಮ್ ಆಗಿರುವ ಅವಶ್ಯಕತೆ ಇಲ್ಲ. ಇದು ವಕ್ಫ್ ಆಡಳಿತವನ್ನು ಕಬಳಿಸಲು ಮಾಡಿದ ವ್ಯವಸ್ಥಿತ ಸಂಚಾಗಿದೆ.

ಈ ಸಂದರ್ಭದಲ್ಲಿ ಎಚ್ ಡಿ ಪಿ ಐ ಬಾಗಲಕೋಟೆ ಜಿಲ್ಲಾ ಕಾರ್ಯದರ್ಶಿಯಾದ ರಫೀಕ್ ನದಾಫ್, ಮತ್ತು ಬಾಗಲಕೋಟ್ ವಿಧಾನಸಭಾ ಕ್ಷೇತ್ರದ ಉಪಾಧ್ಯಕ್ಷರಾದ ಮಹಿಬೂಬ್ ಹಡಗಲಿ, ಸದಾಂ ಮುಲ್ಲಾ, ಮೋಹಿನ್ ಕಲಾದಗಿ, ಅಲ್ತಾಫ್ ಮದರಿ ಮತ್ತು ಪಕ್ಷದ ಕಾರ್ಯಕರ್ತರು ಮತ್ತು ಪಕ್ಷದ ಹಿತೈಷಿಗಳು ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ