ತುಮಕೂರು – ಸಹಕಾರ ಪ್ರಶಸ್ತಿ ಪುರಸ್ಕೃತರಾದ ಶ್ರೀ ಜಿ ಎಸ್ ರವಿ ಹಾಗೂ ಲಕ್ಷ್ಮೀನಾರಾಯಣರವರಿಗೆ ತಿಪಟೂರು ತಾಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಹಾಗೂ ಡಿಸಿಸಿ ಬ್ಯಾಂಕ್ ತಿಪಟೂರು ಶಾಖೆ ವತಿಯಿಂದ ಸನ್ಮಾನಿಸಲಾಯಿತು.
ತುಮಕೂರು ಡಿಸಿಸಿ ಬ್ಯಾಂಕ್ ತಿಪಟೂರು ಶಾಖೆಗೆ ಆಗಮಿಸಿದ್ದ ಸಹಕಾರ ಪ್ರಶಸ್ತಿ ಪುರಸ್ಕೃತರಾದ ಡಿಸಿಸಿ ಬ್ಯಾಂಕ್ ನಿರ್ದೇಶಕರು ಶ್ರೀ ಜಿಎಸ್ ರವಿ ರವರಿಗೆ ಹಾಗೂ ಶ್ರೀ ಲಕ್ಷ್ಮಿನಾರಾಯಣರವರಿಗೆ ಸನ್ಮಾನಿಸಿ ಮಾತನಾಡಿದ ಡಿಸಿಸಿ ಬ್ಯಾಂಕ್ ಮೇಲ್ವಿಚಾರಕರಾದ ಟಿಪಿ ಉಮಾಶಂಕರ್ ರವರು ಶ್ರೀ ಯುತರುಗಳು ಸಹಕಾರ ಕ್ಷೇತ್ರಕ್ಕೆ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ನಮ್ಮ ರಾಜ್ಯ ಸರ್ಕಾರವು ಸಹಕಾರ ರತ್ನ ಪ್ರಶಸ್ತಿ ನೀಡಿರುವುದು ತುಂಬಾ ಸಂತಸದ ವಿಚಾರ ಎಂದು ತಿಳಿಸಿದರು.
ಸನ್ಮಾನ ಸ್ವೀಕರಿಸಿದ ಶ್ರೀ ಜಿಎಸ್ ರವಿ ರವರು ಮಾತನಾಡಿ ಪ್ರಾಥಮಿಕ ಕೃಷಿ ಸಹಕಾರ ಸಂಘಗಳು ಹಾಗೂ ಡಿಸಿಸಿ ಬ್ಯಾಂಕ್ ಗಳು ರಾಷ್ಟ್ರೀಕೃತ ಬ್ಯಾಂಕುಗಳಿಗೆ ಪೈಪೋಟಿ ನಡೆಯುತ್ತಾ ಉತ್ತಮವಾದ ಸೇವೆ ಸಲ್ಲಿಸಲು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಡಿಸಿಸಿ ಬ್ಯಾಂಕ್ ತಿಪಟೂರು ಶಾಖೆಯ ವ್ಯವಸ್ಥಾಪಕರಾದ ಪ್ರವೀಣ್ ಕುಮಾರ್, ಮೇಲ್ವಿಚಾರಕ ಟಿಪಿ ಉಮಾಶಂಕರ್, ತಾಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಹಾಗೂ ಬ್ಯಾಂಕ್ ಸಿಬ್ಬಂದಿ ಹಾಜರಿದ್ದರು.
ವರದಿ – ಸಿಡ್ಲೆಹಳ್ಳಿ ಮನು
