ಬೀದರ್/ ಚಿಟಗುಪ್ಪ : ಹಳ್ಳಿಗಳ ಅಭಿವೃದ್ಧಿಯೇ ಗ್ರಾಮಾಭಿವೃದ್ಧಿ ಯೋಜನೆ ಮುಖ್ಯ ಉದ್ದೇಶವಾಗಿದೆ. ದೇಶವಾಸ್ಥಗಳ , ಶಾಲೆಗಳ ಘಂಟನ್ನಾದವೇ ಅಭಿವೃದ್ಧಿ ಮೂಲ ಸಂಕೇತ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಪ್ರವೀಣಕುಮಾರ ಹೇಳಿದರು.
ತಾಲೂಕಿನ ಉಡಬಾಳ ಗ್ರಾಮದ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನದ ಅಭಿವೃದ್ಧಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ 1.50 ಲಕ್ಷ ರೂ. ಚೆಕ್ ವಿತರಿಸಿ ಮಾತನಾಡಿದ ಅವರು ಬೀದರ್ ಜಿಲ್ಲೆ ಈಗ ಎಲ್ಲಾ ರೀತಿಯಲ್ಲೂ ಅಭಿವೃದ್ಧಿ ಹೊಂದುತ್ತಿದೆ. ಹೈನುಗಾರಿಕೆ ವೇಗವಾಗಿ ಬೆಳೆಯಲು ವೀರೇಂದ್ರ ಹೆಗ್ಗಡೆಯವರ ರಾಜ್ಯಸಭಾ ಅನುದಾನ ಬಳಕೆ ಮಾಡಿಕೊಂಡು ಬೀದರ ಜಿಲ್ಲೆಯವರು ಯಶಸ್ವಿ ಹೈನುಗಾರಿಕೆಯತ್ತ ಬೆಳೆಯುತ್ತಿದ್ದಾರೆ ಎಂದರು.
ಈ ನಿಟ್ಟಿನಲ್ಲಿ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಗಳು ಹಾಕಿಕೊಂಡು ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗಾಗಿ ಕೆಲಸ ಮಾಡಲಾಗುತ್ತಿದೆ. ವಿಶೇಷವಾಗಿ ದೇವಸ್ಥಾನಗಳ ಜೀರ್ಣೋದ್ಧಾರಕ್ಕೆ ವಿಶೇಷ ಅನುದಾನ ನೀಡಿ, ದೇವಸ್ಥಾನಗಳ ಜೀರ್ಣೋದ್ಧಾರ ಕಾರ್ಯ ಮಾಡುತ್ತಿದ್ದೇವೆ ಎಂದು ಹೇಳಿದರು.
ಜನಜಾಗೃತಿ ಜಿಲ್ಲಾ ಸಮಿತಿ ಉಪಾಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ ಮಾತನಾಡಿ ಅನುದಾನ ಉಪಯೋಗಿಸಿಕೊಂಡು ದೇವಸ್ಥಾನ ಅಭಿವೃದ್ಧಿ ಹೊಂದಿ , ಗ್ರಾಮಕ್ಕೆ ಮಾದರಿ ಮತ್ತು ಪ್ರೇರೇಪಣೆ ಆಗಲಿ ಎಂದರು.
ಈ ಸಂದರ್ಭದಲ್ಲಿ ಜನಜಾಗೃತಿ ವೇದಿಕೆ ಜಿಲ್ಲಾ ಸದಸ್ಯರಾದ ಸಂತೋಷ ಹಳ್ಳಿಖೇಡಕರ್, ಸಂಗಮೇಶ ಎನ್ ಜವಾದಿ ಸೇರಿದಂತೆ ದೇವಸ್ಥಾನ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು.
ತಾಲೂಕು ಯೋಜನಾಧಿಕಾರಿ ಬಸವರಾಜ ರವರು ಸರ್ವರನ್ನು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.
ಸಿದ್ದು ಪೂಜಾರಿ ನಿರೂಪಿಸಿ, ವಂದಿಸಿದರು.
