ಕಲಬುರಗಿ: ಆರ್ಥಿಕ ಪರಿಸ್ಥಿತಿ ನೆಪವಡ್ಡಿ ರಾಜ್ಯದ 9 ವಿಶ್ವವಿದ್ಯಾಲಯಗಳನ್ನು ಮುಚ್ಚಲು ಹೊರಟಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ಎಬಿವಿಪಿ ವತಿಯಿಂದ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ವಿಶ್ವವಿದ್ಯಾಲಯ ಉಳುವಿಗಾಗಿ ಭಿಕ್ಷಾಟನೆ ಮಾಡಲಾಯಿತು.
ಈ ಸಂದರ್ಭದಲ್ಲಿ ವಿಭಾಗ ಸಂಘಟನಾ ಕಾರ್ಯದರ್ಶಿ ಪಾಂಡು ಮೋರೆ ಮಾತನಾಡಿ, ವಿಶ್ವವಿದ್ಯಾಲಯಗಳು ವಿದ್ಯಾರ್ಥಿಗಳಿಗೆ ವಿದ್ಯಾರ್ಜನೆಯ ಕೇಂದ್ರಗಳು ಅಲ್ಲಿಂದ ಹೊರಡುವ ವಿದ್ಯಾರ್ಥಿಗಳು ದೇಶದ ಅಭಿವೃದ್ಧಿಗೆ ಪೂರಕವಾಗಿ ಕಾರ್ಯನಿರ್ವಹಿಸುವ ವ್ಯಕ್ತಿಗಳಾಗುತ್ತಾರೆ, ಅಂತಹ ವಿಶ್ವವಿದ್ಯಾಲಯಗಳಿಗೆ ಮೂಲಭೂತ ಸೌಲಭ್ಯಗಳನ್ನು ನೀಡುವುದು, ಸರ್ಕಾರಗಳ ಆದ್ಯ ಕರ್ತವ್ಯ, ಆದರೆ ಕರ್ನಾಟಕ ರಾಜ್ಯದಲ್ಲಿ ಹಿಂದಿನ ಸರ್ಕಾರ ಘೋಷಣೆ ಮಾಡಿದ್ದ ಹೊಸ ವಿಶ್ವವಿದ್ಯಾಲಯಗಳನ್ನು ಇಂದಿನ ರಾಜ್ಯ ಸರ್ಕಾರ ಮುಚ್ಚಲು ಹೊರಟಿರುವುದನ್ನು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ತೀವ್ರವಾಗಿ ಖಂಡಿಸುತ್ತದೆ.
ಕರ್ನಾಟಕ ರಾಜ್ಯದ ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ ಅವರ ನೇತೃತ್ವದ ಸಚಿವ ಸಂಪುಟದ ಉಪ ಸಮಿತಿಯು ಆರ್ಥಿಕ ಹಾಗೂ ಮೂಲಭೂತ ಸೌಲಭ್ಯಗಳ ನೆಪವನ್ನು ಹೇಳಿ ವಿಶ್ವವಿದ್ಯಾಲಯಗಳನ್ನು ಮುಚ್ಚಲು ಹೊರಟಿರುವುದು ಶಿಕ್ಷಣ ವಿರೋಧಿ ನೀತಿಯಾಗಿದೆ. ಸರ್ಕಾರಗಳು ವಿಶ್ವವಿದ್ಯಾಲಯಗಳ ಸ್ಥಾಪನೆ ಹಾಗೂ ಮುಚ್ಚುವ ಮನಸೋ ಇಚ್ಛೆ ಕಾರ್ಯದಿಂದ ವಿಶ್ವವಿದ್ಯಾಲಯಗಳ ಮೇಲೆ ಮತ್ತು ಶೈಕ್ಷಣಿಕ ಕ್ಷೇತ್ರದ ಮೇಲೆ ಇರುವ ವಿಶ್ವಾಸಾರ್ಹತ ಕಡಿಮೆಯಾಗುತ್ತಿವೆ ಎಂದರು. ವಿಶ್ವವಿದ್ಯಾಲಯಗಳ ಕುರಿತು ಯಾವುದೇ ನಿರ್ಣಯಗಳನ್ನ ತಗೆದುಕೊಳ್ಳಬೇಕಾದರೆ ಶಿಕ್ಷಣ ತಜ್ಞರ ಸಲಹೆಗಳನ್ನು ತೆಗೆದಕೊಳ್ಳಬೇಕೆ ಹೊರತು ರಾಜಕೀಯ ಕೇಂದ್ರಿತ ನಿರ್ಧಾರಗಳು ಆಗಬಾರದು ಎಂಬುದು ಎಬಿವಿಪಿ ಆಶಯವಾಗಿದೆ. ಸಾಮಾನ್ಯವಾಗಿ 10,000 ವಿದ್ಯಾರ್ಥಿಗಳಿಗೆ ಒಂದು ವಿಶ್ವವಿದ್ಯಾಲಯಗಳು ಇರಬೇಕೆಂಬುದು ಆದರ್ಶವಾದ ವಿಚಾರವಾಗಿದೆ. ಆದರೆ ನಮ್ಮಲ್ಲಿರುವ ವಿದ್ಯಾರ್ಥಿಗಳ ಸಂಖ್ಯೆಗೆ ಹೋಲಿಕೆ ಮಾಡಿದರೆ ಈಗಿರುವ ವಿಶ್ವವಿದ್ಯಾಲಯಗಳ ಸಂಖ್ಯೆ ಕಡಿಮೆ ಇದೆ. ವಿದ್ಯಾರ್ಥಿಗಳ ಅಂಕಪಟ್ಟಿ, ಪ್ರಮಾಣ ಪತ್ರ, ಹಾಗೂ ಇನ್ನಿತರ ಸಮಸ್ಯಗಳ ಪರಿಹಾರಕ್ಕೆ ಸುಮಾರು 200 ಕಿಮೀ ವಿಧ್ಯಾರ್ಥಿಗಳು ಪ್ರಯಾಣ ಮಾಡಬೇಕು,ಇಂತಹ ಸಮಸ್ಯ ಪರಿಹಾರಕ್ಕೆ ಹೊಸ ವಿವಿಗಳು ಸಹಕಾರಿಯಾಗಗಬೇಕು, ಯಾವುದೇ ಸರ್ಕಾರಗಳು ಘೋಷಣೆ ಮಾಡಿದ ವಿಶ್ವವಿದ್ಯಾಲಯಗಳನ್ನು ಅಭಿವೃದ್ಧಿಪಡಿಸಬೇಕೆ ಹೊರತು ಅತಂತ್ರಗೊಳಿಸಬಾರದು, ರಾಜ್ಯದಲ್ಲಿ ಆಳ್ವಿಕೆ ಮಾಡುತ್ತಿರುವ ರಾಜ್ಯ ಸರ್ಕಾರ
ಎರಡು ವರ್ಷ ಕಳೆದರೂ ಸಹಿತ ವಿಶ್ವವಿದ್ಯಾಲಯಗಳ ಅಭಿವೃದ್ಧಿಗೆ ಕಿಂಚಿತ್ತು ಗಮನಕೊಡದೆ ಈಗ ಮೂಲಭೂತ ಸೌಲಭ್ಯಗಳ ನೆಪವೊಡ್ಡಿ ಮುಚ್ಚುತ್ತಿರುವುದನ್ನು ನೋಡಿದರೆ ಸರ್ಕಾರ ವಿದ್ಯಾರ್ಥಿ ವಿರೋಧಿ,ಶಿಕ್ಷಣ ವಿರೋಧಿ ನೀತಿಯನ್ನು ಅನುಸರಿಸುತ್ತಿರುವುದು ಸ್ಪಷ್ಟವಾಗಿ
ಕಾಣುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರ ಕೂಡಲೇ ವಿಶ್ವವಿದ್ಯಾಲಯಗಳನ್ನು ಮುಚ್ಚುವ ನಿರ್ಧಾರದಿಂದ ಹಿಂದೆ ಸರಿದು ವಿಶ್ವವಿದ್ಯಾಲಯಗಳ ಮೂಲಭೂತ ಸೌಲಭ್ಯಕ್ಕೆ ಅನುದಾನವನ್ನು ನೀಡಿ ವಿಶ್ವವಿದ್ಯಾಲಯಗಳ ಉನ್ನತೀಕರಣಕ್ಕಾಗಿ ಅನುದಾನ ನೀಡುವಂತೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದರು.
ಈ ಸಂದರ್ಭದಲ್ಲಿ ರಾಜ್ಯ ಕಾರ್ಯಕಾರಣಿ ಸದಸ್ಯ ಮನೋಜ್ ಪಾಟೀಲ್, ರಾಜ್ಯ ಫಾರ್ಮಾವಿಷನ್ ಪ್ರಮುಖ ಬಸವರಾಜ, ನಗರ ಸಹ ಕಾರ್ಯದರ್ಶಿ ಸಂದೇಶ ಕೋಬಾಳಕರ, ರಕ್ಷಿತಾ ಜವಳಿ, ನಗರ ಕಾರ್ಯಕರ್ತರಾದ, ದಿಲೀಪ, ಶಿವರಾಜ, ಅಂಕುಶ, ವಿಜಯ, ವೆಂಕಟೇಶ ಕಾರ್ಯಕರ್ತರು ಸೇರಿದಂತೆ ಇತರರು ಭಾಗಿಯಾಗಿದ್ದರು.
