ಶಿವಮೊಗ್ಗ: ನಗರದ ಶೆಟ್ಟಿಕೊಪ್ಪದ ಸಾಹಿತ್ಯ ಗ್ರಾಮದ ಸಾಹಿತ್ಯ ಪರಿಷತ್ ಸಭಾಂಗಣದಲ್ಲಿ ಮಾನ್ಯ ಜಿಲ್ಲಾ ಉಸ್ತುವಾರಿ ಮಂತ್ರಿಗಳು ರಾಜ್ಯ ಶಿಕ್ಷಣ ಮತ್ತು ಸಾಕ್ಷರತೆ ಖಾತೆ ಮಂತ್ರಿಗಳಾದ ಶ್ರೀ ಮಧು ಬಂಗಾರಪ್ಪ ಅವರೊಂದಿಗೆ ಮಲೆನಾಡು ಅಭಿವೃದ್ಧಿ ಮಂಡಳಿ ಅಧ್ಯಕ್ಷ ಶ್ರೀ ಆರ್ ಎಂ ಮಂಜುನಾಥ ಗೌಡ ಅವರು ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿ ಅವರ ವೈಯಕ್ತಿಕ 5 ಲಕ್ಷ ಧನಸಹಾಯವನ್ನು ಚೆಕ್ ಮೂಲಕ ನೀಡಿದ ಸಂದರ್ಭದಲ್ಲಿ ಉಪಸ್ಥಿತಿ ಇದ್ದು, ಅಧಿಕಾರಿಗಳು ಮತ್ತು ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಡಿ ಮಂಜುನಾಥ್ ಅವರೊಂದಿಗೆ ಪ್ರಗತಿಯ ಬಗ್ಗೆ ಪರಿಶೀಲನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಬಲ್ಕೀಶ್ ಬಾನು ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಚಂದ್ರ ಭೂಪಾಲ್ ಅವರು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರುಗಳು ಉಪಸ್ಥಿತಿ ಇದ್ದರು.
ವರದಿ : ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ
