ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಹಳೆ ಪಿಂಚಣಿ ಜಾರಿಗೆ ಶೀಘ್ರವೇ ಕ್ರಮ : ಸಿ ಎಂ ಸಿದ್ದರಾಮಯ್ಯ, ಡಿ.ಸಿ.ಎಂ ಡಿ.ಕೆ ಶಿವಕುಮಾರ್ ಘೋಷಣೆ

ಬೆಂಗಳೂರು : ತ್ರಿಪುರವಾಸಿನಿ ಅರಮನೆ ಆವರಣದಲ್ಲಿ ದಿ: 20.02.2025 ರಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾಯಿತ ನಿರ್ದೇಶಕರು ಹಾಗೂ ಪದಾಧಿಕಾರಿಗಳ “ಸಮಾವೇಶ ಹಾಗೂ ಕಾರ್ಯಾಗಾರ” ಕಾರ್ಯಕ್ರಮ ಯಶಸ್ವಿಯಾಗಿರುತ್ತದೆ.

ಈ ಕಾರ್ಯಾಗಾರದಲ್ಲಿ ಮಾನ್ಯ ಕರ್ನಾಟಕ ಲೋಕಾಯುಕ್ತರಾದ ಗೌರವಾನ್ವಿತ ನ್ಯಾಯಮೂರ್ತಿಗಳಾದ ಬಿ ಎಸ್ ಪಾಟೀಲರು “ಪ್ರಜಾಸ್ನೇಹಿ ಆಡಳಿತ” ಕಾರ್ಯಗಾರದಲ್ಲಿ ರಾಜ್ಯ ಸರ್ಕಾರಿ ನೌಕರರು ಸಂವಿಧಾನದ ಮೂಲ ಆಶಯಗಳು ಹಾಗೂ ನಾಗರೀಕ ಸೇವಾ ನಿಯಮಗಳಡಿಯಲ್ಲಿ ಪ್ರಾಮಾಣಿಕತೆಯಿಂದ ಹಾಗೂ ಯಾವುದೇ ಚ್ಯುತಿ ಬಾರದಂತೆ ಕರ್ತವ್ಯ ನಿರ್ವಹಿಸಬೇಕು. ಸಾರ್ವಜನಿಕರಿಗೆ ಸೌಜನ್ಯಯುತವಾಗಿ ಸ್ಪಂದಿಸಿ ಪ್ರತಿಫಲಾಪೇಕ್ಷೆ ಇಲ್ಲದೇ ಸೇವೆಯನ್ನು ನೀಡುವುದು ನೌಕರರ ಆದ್ಯ ಕರ್ತವ್ಯವಾಗಿದೆ ಎಂದು ಸಲಹೆ ನೀಡಿದರು.
ಅದೇ ರೀತಿ ರಾಜ್ಯ ಮಾಹಿತಿ ಆಯೋಗ, ಕಲಬುರಗಿ ಪೀಠದ ಆಯುಕ್ತರಾದ ಶ್ರೀ ರವೀಂದ್ರ ಗುರುನಾಥ ಧಾಕಪ್ಪ ರವರು ‘ಮಾಹಿತಿ ಹಕ್ಕು ಅಧಿನಿಯಮ(2005) ಸವಾಲುಗಳು- ಪರಿಹಾರಗಳು’ ಕುರಿತು ಮಾತನಾಡುತ್ತಾ, ಮಾಹಿತಿ ಹಕ್ಕು ಅಧಿನಿಯಮದ ಮೂಲ ಉದ್ದೇಶ, ಸಾರ್ವಜನಿಕರ ಹಿತಾಸಕ್ತಿ ಅಡಿಯಲ್ಲಿ ಸಾರ್ವಜನಿಕರಿಗೆ ಅಗತ್ಯ ಮಾಹಿತಿಯನ್ನು ನೀಡಬೇಕಾಗಿರುತ್ತದೆ. ಈ ನಿಟ್ಟಿನಲ್ಲಿ ನೌಕರರು ಎಲ್ಲಾ ನಿಯಮಗಳನ್ನು ಸಮಗ್ರವಾಗಿ ಅಧ್ಯಯನ ನಡೆಸಿ ಅರ್ಥಮಾಡಿಕೊಂಡಲ್ಲಿ ಕರ್ತವ್ಯ ನಿರ್ವಹಿಸುವುದು ಸುಲಭವಾಗಲಿದೆ. ಹಾಗೂ ಸರ್ಕಾರಿ ನೌಕರರ ವೈಯಕ್ತಿಕ ಮಾಹಿತಿಗಳನ್ನು ಕೋರಲು ಅವಕಾಶ ಇರುವುದಿಲ್ಲ ಎಂದು ಸಮಗ್ರ ಮಾಹಿತಿಯನ್ನು ನೀಡಿದರು.

ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ವರ್ಚುಲ್ ಮೂಲಕ ಸಮಾವೇಶವನ್ನು ಉದ್ದೇಶಿಸಿ ಮಾತನಾಡುತ್ತಾ, ನನ್ನ ಎರಡೂ ಅವಧಿಯಲ್ಲಿ ವೇತನ ಆಯೋಗ ಜಾರಿಗೆ ತಂದು ನೌಕರರ ಪರವಾಗಿದ್ದೇನೆ. 2018ರಲ್ಲಿ 6ನೇ ವೇತನ ಆಯೋಗ, 2024ರಲ್ಲಿ 7ನೇ ವೇತನ ಆಯೋಗ ಜಾರಿಗೆ ತಂದಿದ್ದೇನೆ, ನೌಕರರು ಹಾಗೂ ಕುಟುಂಬದ ಸದಸ್ಯರಿಗೆ ರೂ.1.00 ಕೋಟಿ ವಿಮಾ ಮೊತ್ತ ಹಾಗೂ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಜಾರಿಗೆ ತರಲು ಸಂಪುಟದ ಅನುಮೋದನೆ ಪಡೆದಿದ್ದು, ಶೀಘ್ರವೇ ಸರ್ಕಾರಿ ಆದೇಶ ಹೊರಡಿಸಲಾಗುವುದು. ಹಾಗೂ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ” ತಾಂತ್ರಿಕ ಕಾರಣದಿಂದ ಅನುಷ್ಠಾನಗೊಳ್ಳದೇ ಬಾಕಿಯಿದ್ದು, ಶೀಘ್ರದಲ್ಲಿಯೇ ಜಾರಿಗೊಳಿಸಲಾಗುವುದು. ಎನ್ ಪಿಎಸ್ ರದ್ದುಪಡಿಸಿ ಓಪಿಎಸ್ ಜಾರಿಗೊಳಿಸಲು ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯಂತೆ ಜಾರಿಗೊಳಿಸಲಾಗುವುದಾಗಿ ತಿಳಿಸಿದರು.

ಸಮಾವೇಶವನ್ನು ಉದ್ಘಾಟಿಸಿ ಮಾಡನಾಡಿದ ಉಪ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಡಿ ಕೆ ಶಿವಕುಮಾರ್ ಇವರು ನಾನೂ ಒಬ್ಬ ಸರ್ಕಾರಿ ನೌಕರರನಾಗಿದ್ದು, ಸರ್ಕಾರಿ ನೌಕರರು ಕಾರ್ಯಾಂಗದ ಭಾಗವಾಗಿದ್ದು, ಪ್ರಾಮಾಣಿಕ ಹಾಗೂ ದಕ್ಷತೆಯಿಂದ ಕಾರ್ಯ ನಿರ್ವಹಿಸಿದಾಗ ಮಾತ್ರ ರಾಜ್ಯದ ಅಭಿವೃದ್ಧಿ ಸಾಧ್ಯ. ಶ್ರೀಸಾಮಾನ್ಯರಿಗೆ ಸರ್ಕಾರದ ಯೋಜನೆಗಳನ್ನು ಮುಟ್ಟಿಸುವಲ್ಲಿ ನಿಮ್ಮ ಪಾತ್ರ ಮಹತ್ತರವಾಗಿದೆ. ತಮಗೆ ಶ್ರೀಸಾಮಾನ್ಯರ ಸೇವೆ ಸಲ್ಲಿಸುವ ಅವಕಾಶ ದೊರಕಿರುವುದು ಸುದೈವವೆಂದು ಭಾವಿಸಿ ಸೇವೆ ಮಾಡಿ. ನಿಮ್ಮ ಬೇಡಿಕೆಗಳನ್ನು ಈಡೇರಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು. ಈ ಬಗ್ಗೆ ನೌಕರರು ನಂಬಿಕೆ ಇಡಿ. ಸಂಘದ ಸ್ವಂತ ಕಟ್ಟಡ ನಿರ್ಮಾಣಕ್ಕೆ ಅನುದಾನ ನೀಡುವ ಭರವಸೆಯನ್ನು ಸಹ ನೀಡಿದರು.
ರಾಜ್ಯಾಧ್ಯಕ್ಷರಾದ ಸಿ ಎಸ್ ಷಡಕ್ಷರಿಯವರು ಪ್ರಾಸ್ತಾವಿಕವಾಗಿ ಮಾತನಾಡುತ್ತಾ, ಎನ್ ಪಿಎಸ್ ರದ್ದುಪಡಿಸುವುದು ನನ್ನ ಆದ್ಯ ಗುರಿಯಾಗಿದೆ. ಇದರಲ್ಲಿ ನೌಕರರಲ್ಲಿ ಅನುಮಾನ ಬೇಡ. ನೌಕರರ ಹಿತ ಕಾಯಲು ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತೇನೆ. ಎಂದರು ಕಾರ್ಯಕ್ರಮದಲ್ಲಿ ಸುಮಾರು 10,000 ಪದಾಧಿಕಾರಿಗಳು, ನೌಕರರು ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಸಾಕ್ಷಿಯಾದರು. ಕೊಟ್ಟೂರಿನ ಸಂಘದ ಅಧ್ಯಕ್ಷರು, ಪದಾಧಿಕಾರಿಗಳೆಲ್ಲರೂ ಭಾಗವಹಿಸಲಾಗಿದ್ದು, ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ವ್ಯವಸ್ಥೆಮಾಡಿ ಯಶಸ್ವಿಗೊಳಿಸಿದ ರಾಜ್ಯಾಧ್ಯಕ್ಷರಿಗೆ ಹಾಗೂ ರಾಜ್ಯ ಸಂಘದ ಪದಾಧಿಕಾರಿಗಳಿಗೆ ರಾಜ್ಯದ ಸಮಸ್ತ ನೌಕರರ ಪರವಾಗಿ ಕೊಟ್ಟೂರು ಶಾಖೆಯ ಅಧ್ಯಕ್ಷರಾದ ಯೋಗೀಶ್ವರ ದಿನ್ನೆ ಹಾಗೂ ಎಲ್ಲಾ ಪದಾಧಿಕಾರಿಗಳು ಈ ಮೂಲಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ