ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಆಸ್ತಿಗೆ ಸಂಬಂಧಪಟ್ಟ ದಾಖಲೆಗಳನ್ನು ಸಲ್ಲಿಸಿ ಇ-ಖಾತಾ ಮಾಡಿಕೊಳ್ಳಲು ಪುರಸಭೆ ಮುಖ್ಯಾಧಿಕಾರಿ ಮನೋಜಕುಮಾರ ಗುರಿಕಾರ ಕರೆ

ಕಲಬುರಗಿ ಜಿಲ್ಲೆಯ ಚಿತ್ತಾಪುರ ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿ ಕಟ್ಟಡಗಳು ಮತ್ತು ನಿವೇಶನಗಳನ್ನು ಹೊಂದಿರುವ ಆಸ್ತಿ ಮಾಲೀಕರು ತಮ್ಮ ಆಸ್ತಿಗೆ ಸಂಬಂಧಪಟ್ಟ ದಾಖಲೆಗಳನ್ನು ಸಲ್ಲಿಸಿ ಇ-ಖಾತಾ ಮಾಡಿಕೊಳ್ಳಬೇಕು ಎಂದು ಪಟ್ಟಣದ ಸಾರ್ವಜನಿಕರಿಗೆ ಪುರಸಭೆ ಮುಖ್ಯಾಧಿಕಾರಿ ಮನೋಜಕುಮಾರ ಗುರಿಕಾರ ಕರೆ ನೀಡಿದ್ದಾರೆ.

ಸರ್ಕಾರದ ಅಧೀನ ಕಾರ್ಯದರ್ಶಿಗಳು, ನಗರಾಭಿವೃದ್ಧಿ ಇಲಾಖೆ ಬೆಂಗಳೂರು ರವರ ಅಂತಿಮ ಅಧಿಸೂಚನೆಯಂತೆ ಪುರಸಭೆ ವ್ಯಾಪ್ತಿಯೊಳಗೆ ಬರುವ ಸರ್ಕಾರಿ/ಸ್ಥಳೀಯ ಸಂಸ್ಥೆಯ ಒಡೆತನದಲ್ಲಿರುವ ಆಸ್ತಿಗಳನ್ನು ಹೊರತುಪಡಿಸಿ ಇನ್ನುಳಿದ ಕಟ್ಟಡ /ನಿವೇಶನಗಳಿಗೆ ಆಸ್ತಿ ನಿರ್ಧರಣೆಗೊಳಿಸಿ, 2024-25 ನೇ ಸಾಲಿನ ಅಂತ್ಯದವರೆಗೆ ಪೂರ್ಣ ಪ್ರಮಾಣದಲ್ಲಿ ಆಸ್ತಿ ತೆರಿಗೆ ಪಾವತಿಸಿಕೊಂಡು ಆಸ್ತಿ ಮಾಲೀಕರಿಂದ ಅವಶ್ಯಕ ದಾಖಲಾತಿಗಳನ್ನು ಹಾಜರುಪಡಿಸಿಕೊಂಡು, ಕರ್ನಾಟಕ ಪೌರಸಭೆಗಳ ಅಧಿನಿಯಮದ 1964ರ ಸೆಕ್ಷನ್ 106(1ಬಿ) (ii) ಪ್ರಕಾರ ಗಣಕೀಕೃತ ನಮೂನೆ-3 ಮತ್ತು ನಮೂನೆ-3 ಎ ಪಡೆದುಕೊಂಡು ನೋಂದಾಯಿತ ಕಚೇರಿಯಲ್ಲಿ ನೋಂದಣಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿರುತ್ತದೆ ಆದ್ದರಿಂದ ಎಲ್ಲಾ ಆಸ್ತಿ ಮಾಲೀಕರುಗಳು ಈ ಸದುಪಯೋಗವನ್ನು ಪಡೆದುಕೊಂಡು ನಿಮ್ಮ ಆಸ್ತಿಗಳನ್ನು ಗಣಕೀಕೃತ ಮಾಡಿಕೊಳ್ಳಲು ಈ ಮೂಲಕ ತಿಳಿಸಿದ್ದಾರೆ.

ಸದರಿ ನಮೂನೆ – 3ಎ ಪಡೆಯಲು ಬೇಕಾದ ದಾಖಲಾತಿಗಳು

ನೋಂದಣಿ ಕಚೇರಿಯಿಂದ ಖರೀದಿ ಪತ್ರ ಮತ್ತು ಇ.ಸಿ, ವಿಭಜನೆ ಪತ್ರ, ದಾನ ಪತ್ರ (ಗಿಫ್ಟಟೇಡ್), ಆಸ್ತಿ ತೆರಿಗೆ ಚಲನ್ ಪ್ರತಿ, ಆಸ್ತಿ ಮಾಲೀಕರ ಭಾವಚಿತ್ರ, ಆಸ್ತಿ ಛಾಯಾಚಿತ್ರ ಆಧಾರ್ ಕಾರ್ಡ್ ಇತರೆ ಆಸ್ತಿಗೆ ಸಂಬಂಧಿಸಿದಂತೆ ದಾಖಲಾತಿಗಳನ್ನು ಸಲ್ಲಿಸಿ ನಮೂನೆ – 3ಎ ಪಡೆದುಕೊಳ್ಳಲು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ

ಹೆಲ್ಫ್ ಡೆಸ್ಕ್ ಸ್ಥಳಗಳು

ಪಟ್ಟಣದ ಕೆನರಾ ಬ್ಯಾಂಕ್‌ ಎದುರುಗಡೆಯ ಪುರಸಭೆ ಮಳಿಗೆ ಹಾಗೂ ಪುರಸಭೆ ಕಚೇರಿಯಲ್ಲಿ ಎರಡು ಹೆಲ್ಫ್ ಡೆಸ್ಕ್ ಸಹಾಯವಾಣಿ ಕೇಂದ್ರಗಳನ್ನು ತೆರೆಯಲಾಗಿದೆ. ಹೆಚ್ಚಿನ ಮಾಹಿತಿಗಾಗಿ
ಶರಣಪ್ಪ ಮಡಿವಾಳ 9972455403, ರಿಯಾಜೋದ್ದಿನ್ ಕಂದಾಯ ನಿರೀಕ್ಷಕರು 9118484446,
ಮರಿಯಣ್ಣ ಕರವಸೂಲಿಗಾರ 9845643905, ರಾಜಕುಮಾರ್ ಕರವಸೂಲಿಗಾರ 9901098874, ರವಿಶಂಕರ್ ಎಸ್.ಡಿ.ಎ 9036534231 ಇವರಿಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವರದಿ ಮೊಹಮ್ಮದ್ ಅಲಿ, ಚಿತ್ತಾಪುರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ