ಯುವ ಸಾಹಿತಿ, ಸಂಘಟಕ ಅಸ್ಲಂ ಶೇಖ ಅವರು ಬೆಳಗಾವಿಯ ಕಸ್ತೂರಿ ಸಿರಿಗನ್ನಡ ವೇದಿಕೆ ವತಿಯಿಂದ ಕೊಡಮಾಡುವ ರಾಷ್ಟ್ರ ಮಟ್ಟದ ಸಾಹಿತ್ಯ ವಿಭೂಷಣ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಮೂರು ಕೃತಿಗಳನ್ನು ಹೊರತಂದಿರುವ ಶೇಖ ಅವರು ಕರುನಾಡು ಸಾಹಿತ್ಯ ಪರಿಷತ್ತಿನ ವಿಜಯಪುರ ಜಿಲ್ಲಾ ಅಧ್ಯಕ್ಷರಾಗಿ ಸಾಹಿತ್ಯ ಸೇವೆ ಸಲ್ಲಿಸುತ್ತಿದ್ದಾರೆ, ಇವರ ಸಾಹಿತ್ಯ ಕ್ಷೇತ್ರದ ಸಾಧನೆಗಾಗಿ ರಾಷ್ಟ್ರೀಯ ಸಾಹಿತ್ಯ ವಿಭೂಷಣ ಪ್ರಶಸ್ತಿ ನೀಡಿ ಗೌರವಿಸುತ್ತಿರುವುದು ಶೇಖ ಅವರ ಒಡನಾಡಿಗಳಿಗೆ ಸಂತಸ ತಂದಿದೆ.
ಫೆ. 26ರ ಸಾಯಂಕಾಲ 4 ಗಂಟೆಗೆ ವರ್ಚುವಲ್ ಮೀಟಿಂಗ್ ಮೂಲಕ ಜರುಗುತ್ತಿರುವ ಶ್ರೀ ಸ್ವಾಮಿ ವಿವೇಕಾನಂದರ ಜಯಂತೋತ್ಸವ, ರಾಷ್ಟ್ರೀಯ ಯುವ ದಿನ ಹಾಗೂ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಶೇಖ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಕಸ್ತೂರಿ ಸಿರಿಗನ್ನಡ ವೇದಿಕೆಯ ಅಧ್ಯಕ್ಷ ಎಲ್ ಹೆಚ್ ಪೆಂಡಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
