
ವಿದ್ಯಾರ್ಥಿಗಳು ಅಂಬೇಡ್ಕರ್ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಮತ್ತು ಎಲ್ಲರನ್ನೂ ಪ್ರೀತಿ ಮತ್ತು ಗೌರವದಿಂದ ಕಾಣಬೇಕು ಎಂದು ಕೊಪ್ಪಳ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶಂಕರಯ್ಯ ಹೇಳಿದರು.
ಕೊಪ್ಪಳ : ನಗರದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಶನಿವಾರದಂದು ಕೊಪ್ಪಳದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಕಾಲೇಜಿನ ಸಾಂಸ್ಕೃತಿಕ ಘಟಕ ಮತ್ತು ಐ ಕ್ಯೂ ಎ ಸಿ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಭಾರತ ರತ್ನ ಡಾ. ಬಿ. ಆರ್. ಅಂಬೇಡ್ಕರ್ ಓದು ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸದಲ್ಲಿ ಮಾತನಾಡುತ್ತಾ ಅಂಬೇಡ್ಕರ್ ಭಾರತದ ಶ್ರೇಣೀಕೃತ ವ್ಯವಸ್ಥೆ ವಿರುದ್ದ ಹೋರಾಟ ಮಾಡಿದ್ದಾರೆ. ಅಂಬೇಡ್ಕರ್ ಅವರ ಸಾಧನೆ ಮತ್ತು ಪರಿಶ್ರಮ ಬಹಳ ದೊಡ್ಡದು. ಅವರು ಶಿಕ್ಷಣ ಪಡೆಯವದಕ್ಕೆ ಬಹಳ ಕಷ್ಟವಿತ್ತು. ಅವರಿಗೆ ಕುಡಿಯುವ ನೀರು ಕೂಡಾ ಕೊಡುತ್ತಿರಲಿಲ್ಲ, ಅವರು ಓದುವಾಗ ಅವಮಾನ, ಅಸ್ಪೃಶ್ಯತೆ, ಜಾತಿ ತಾರತಮ್ಯ ವನ್ನು ಅನುಭವಿಸಿದ್ದಾರೆ. ಇದಕ್ಕೆಲ್ಲ ಪರಿಹಾರವೆಂದರೆ ವಿದ್ಯೆಯನ್ನು ಪಡೆಯಬೇಕೆಂದು ಅಂಬೇಡ್ಕರ್ ಅವರ ತಂದೆ ಅವರಿಗೆ ಹೇಳಿದ್ದರು. ಆದ್ದರಿಂದ ಅಂಬೇಡ್ಕರ್ ಅವರು ಬಹಳಷ್ಟು ಪುಸ್ತಕಗಳನ್ನು ಓದುತ್ತಿದ್ದರು. ಅವರು ಸಮಯವನ್ನು ವ್ಯರ್ಥ ಮಾಡುತ್ತಿರಲಿಲ್ಲ. ನಮಗೆ ಹಸಿವಿನ ದಾಹಕ್ಕಿಂತ ವಿದ್ಯೆಯ ಜ್ಞಾನದ ದಾಹ ಹೆಚ್ಚು ಇರಬೇಕು. ಇದು ಅಂಬೇಡ್ಕರ್ ಅವರಿಗೆ ಇತ್ತು. ವಿದ್ಯಾರ್ಥಿಗಳು ಕೂಡ ಅಂಬೇಡ್ಕರ್ ತರಹ ಓದಬೇಕು.
ಅಂಬೇಡ್ಕರ್ ಅವರು ಚೌಡರಕೆರೆ ಮತ್ತು ಕಾಳರಾಮ ದೇವಸ್ಥಾನದ ಪ್ರವೇಶ ಕೂರಿತು ಹೋರಾಟ ಮಾಡಿದರು, ಅವರು ದುಂಡು ಮೇಜಿನ ಸಮ್ಮೇಳನದಲ್ಲಿ ಪಾಲ್ಗೊಂಡಿದ್ದಾರೆ. ಅವರು ಮಹಿಳೆಯರ ಶಿಕ್ಷಣಕ್ಕೆ ಹೆಚ್ಚು ಒತ್ತು ಕೊಟ್ಟಿದ್ದರು. ನಮ್ಮ ದೇಶಕ್ಕಾಗಿ ಅಂಬೇಡ್ಕರ್ ಅವರು ತಮ್ಮ ಜೀವನ ತ್ಯಾಗ ಮಾಡಿದ್ದಾರೆ. ದೇಶಕ್ಕೆ ಶ್ರೇಷ್ಠವಾದ ಸಂವಿಧಾನ ಬರೆದರು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಚಾರ್ಯ ಡಾ. ಗಣಪತಿ ಲಮಾಣಿ ಅವರು ಅಂಬೇಡ್ಕರ್ ಅವರು ಒಬ್ಬ ಮಹಾನ್ ವ್ಯಕ್ತಿ. ಇಂತಹ ಮಹಾನ್ ವ್ಯಕ್ತಿಗಳ ಕುರಿತು ಎಲ್ಲರೂ ತಿಳಿದುಕೊಳ್ಳಬೇಕು ಎಲ್ಲಾ ಜಾತಿ ಜನರಿಗೆ ಸಮಾನ ಹಕ್ಕುಗಳನ್ನು ಸಂವಿಧಾನದಲ್ಲಿ ನೀಡಿದ್ದಾರೆ. ಸಂವಿಧಾನದ ಎಲ್ಲಾ ಹಕ್ಕುಗಳನ್ನು ಉಪಯೋಗ ಮಾಡಿಕೊಳ್ಳಬೇಕು. ನಾವೆಲ್ಲರೂ ಈ ಭೂಮಿ ಇರುವರೆಗೂ ಅಂಬೇಡ್ಕರ್ ಅವರನ್ನು ನೆನಯಬೇಕು ಎಂದು ಹೇಳಿದರು.
ಕಾಲೇಜಿನ ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥ ಶ್ರೀ ವಿಠೋಬ ಎಸ್ ಅವರು ಮಾತನಾಡುತ್ತಾ ನಾವು ಸಮಾನತೆ, ಸ್ವತಂತ್ರವಾಗಿ ಬದುಕುತ್ತಿದ್ದೇವೆ ಎಂದರೆ ಅದಕ್ಕೆ ಸಂವಿಧಾನ ಕಾರಣ , ಭಾರತ ಅಭಿವೃದ್ಧಿಯಾಗಲು ಕೂಡಾ ಸಂವಿಧಾನ ಕಾರಣ. ಭಾರತದ ಸಂವಿಧಾನವನ್ನು ಎಲ್ಲರೂ ಓದಬೇಕು. ಮೂಲಭೂತ ಹಕ್ಕುಗಳು ಮತ್ತು ಮೂಲಭೂತ ಕರ್ತವ್ಯಗಳನ್ನು ಪಾಲನೆ ಮಾಡಬೇಕು ಎಂದರು.
ಕಾಲೇಜಿನಲ್ಲಿ ಅಂಬೇಡ್ಕರ್ ಅವರ ಬದುಕು ಬರಹ ಕುರಿತು ಪ್ರಬಂಧ, ಭಾಷಣ, ರಸಪ್ರೆಶ್ನೆ ಮತ್ತು ಸ್ವ ರಚಿತ ಕವನ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಇದರಲ್ಲಿ ವಿಜೇತರದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಶಿಕ್ಷಣ ಪ್ರೇಮಿ ಬಿ. ಜಿ ಕರಿಗಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರಾದ ಕೊಟ್ರೇಶ್ ಮರಬನಹಳ್ಳಿ, ಕಾಲೇಜಿನ ಸಾಂಸ್ಕೃತಿಕ ಘಟಕದ ಸಂಚಾಲಕರದ ಡಾ. ಹುಲಿಗೆಮ್ಮ, ಐ ಕ್ಯೂ ಎ ಸಿ ಸಂಚಾಲಕ ಡಾ. ಅಶೋಕ ಕುಮಾರ, ಕಾಲೇಜಿನ ಉಪನ್ಯಾಸಕರಾದ ಡಾ. ಪ್ರದೀಪ್ ಕುಮಾರ, ಡಾ. ಮಲ್ಲಿಕಾರ್ಜುನ, ಡಾ. ನರಸಿಂಹ, ಶ್ರೀ ಮತಿ ಸುಮಿತ್ರಾ, ಶುಭ, ಹಾಗೂ ಕಾಲೇಜಿನ ಎಲ್ಲಾ ಅತಿಥಿ ಉಪನ್ಯಾಸಕರು ಮತ್ತು ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವೆಂಕಟೇಶ್ ಹೊಸಮನಿ ಮತ್ತು ಶಂಕರಪ್ಪ ನಿರೂಪಿಸಿದರು. ಅಂಬೇಡ್ಕರ್ ಕ್ರಾಂತಿ ಗೀತೆಗಳನ್ನು ಸಿದ್ದಪ್ಪ ಡಿ ಕಲಾಲ್ ಬಂಡಿ, ಸುಖಮುನಿ ಗಡಗಿ, ವೆಂಕಟೇಶ್ ಹೊಸಮನಿ, ಶಶಿ ಕುಮಾರ್ ಮನ್ನಾಪುರ ಹಾಡಿದರು.
