ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

‘ಭವಿಷ್ಯಕ್ಕಾಗಿ ಪರಿಸರ ಕಾಳಜಿ ಮುಖ್ಯ’ : ವನಸಿರಿ ಅಮರೇಗೌಡ ಮಲ್ಲಾಪುರ

ವನಸಿರಿ ಫೌಂಡೇಷನ್‌ ಹಾಗೂ ಇಕೋ ಕ್ಲಬ್ ಸಂಯುಕ್ತ ಆಶ್ರಯದಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ

ರಾಯಚೂರು/ ಸಿಂಧನೂರು: ನಮ್ಮ ಮುಂದಿನ ಪೀಳಿಗೆಯ ಆರೋಗ್ಯಕರ ಭವಿಷ್ಯಕ್ಕೆ ಪರಿಸರ ಕಾಳಜಿ ಪ್ರತಿಯೊಬ್ಬರಲ್ಲೂ ಬರಬೇಕು, ಪರಿಸರ ಸಂರಕ್ಷಣೆ ಪ್ರಥಮ ಆದ್ಯತೆಯಾಗಬೇಕು ಎಂದು ವನಸಿರಿ ಫೌಂಡೇಷನ್ ಅಧ್ಯಕ್ಷ ಅಮರೇಗೌಡ ಮಲ್ಲಾಪುರ ಹೇಳಿದರು.

ನಗರದ TBP ಕ್ಯಾಂಪ್ ಶಾಸಕರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಇಕೋ ಕ್ಲಬ್ ಹಾಗೂ ವನಸಿರಿ ಪೌಂಡೇಷನ್ ವತಿಯಿಂದ ಅಮರ ಶ್ರೀ ಆಲದ ಮರದ ಹತ್ತಿರ ಹಮ್ಮಿಕೊಂಡಿದ್ದ ಪರಿಸರ ಜಾಗೃತಿ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿ ಪರಿಸರ ದಿನೇ ದಿನೆ ಮಲೀನವಾಗುತ್ತಿದೆ. ಶುದ್ಧ ಗಾಳಿಯೂ ಸಿಗುತ್ತಿಲ್ಲ, ಪರಿಸರ ಮಾಲಿನ್ಯದಿಂದ ಹೊಸ ಹೊಸ ರೋಗಗಳು ಸೃಷ್ಟಿಯಾಗುತ್ತಿವೆ. ಇಳಿ ವಯಸ್ಸಿನಲ್ಲಿ ಸಾವು, ನೋವುಗಳು ಸಂಭವಿಸುತ್ತಿವೆ. ಇದಕ್ಕೆಲ್ಲಾ ಪರಿಸರದ ಅಸಮತೋಲನವೇ ಕಾರಣವಾಗಿದೆ. ಆದ್ದರಿಂದ ಯುವಕರು, ಮಕ್ಕಳು ಪರಿಸರ ರಕ್ಷಣೆ ಮಾಡಬೇಕು. ಗಿಡಗಳನ್ನು ಬೆಳೆಸಬೇಕು, ಕಡಿಯಬಾರದು ಎಂದರು.

ಇದೇ ವೇಳೆ ಅಮರ ಶ್ರೀ ಆಲದ ಮರದ ಉದ್ಯಾನವನಕ್ಕೆ ಮತ್ತು ಸಂಚಾರಿ ಪೊಲೀಸ್ ಠಾಣೆಯ ಆವರಣಕ್ಕೆ ಭೇಟಿ ನೀಡಿ ವನಸಿರಿ ಫೌಂಡೇಷನ್ ವತಿಯಿಂದ ನೆಟ್ಟ ಸಸಿಗಳನ್ನು ವೀಕ್ಷಣೆ ಮಾಡಿದರು.

ಈ ಸಂಧರ್ಭದಲ್ಲಿ ಸಂಚಾರಿ ಪೊಲೀಸ್ ಠಾಣೆಯ ಅಧಿಕಾರಿಗಳು,ಸಿಬ್ಬಂದಿಗಳು, TBP ಕ್ಯಾಂಪ್ ಶಾಲೆಯ ಮುಖ್ಯ ಗುರುಗಳು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಇದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ