ದ್ವಿತೀಯ ಪಿಯು ಪರೀಕ್ಷೆ ಶನಿವಾರ (ಮಾರ್ಚ್ 1) ಆರಂಭವಾಗಿದ್ದು, ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ
ಮೊದಲ ದಿನ ಪ್ರಥಮ ಭಾಷೆ ಕನ್ನಡ ವಿಷಯದ
ವೆಬ್‌ಕಾಸ್ಟಿಂಗ್ ವ್ಯವಸ್ಥೆಯಲ್ಲಿ ಶಾಂತಿಯುತವಾಗಿ ನಡೆಯಿತು. ನಕಲು ತಡೆ ಹಾಗೂ ಪರೀಕ್ಷಾ ಅಕ್ರಮಗಳಿಗೆ ಕಡಿವಾಣ ಹಾಕಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಕಂಪ್ಲಿಯ ಪಿಯುಸಿ ಪರೀಕ್ಷೆಯ ಅಧೀಕ್ಷಕರಾದ ಮೊಹಮ್ಮದ್ ಶಫಿ ಅವರು ಮಾಹಿತಿ ನೀಡಿದ್ದಾರೆ.
ನಿನ್ನೆ ನಡೆದ ಕನ್ನಡ ಪರೀಕ್ಷೆಯಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು 455 ವಿದ್ಯಾರ್ಥಿಗಳಲ್ಲಿ 33 ವಿದ್ಯಾರ್ಥಿಗಳು ಗೈರು ಆಗಿದ್ದಾರೆ ಎಂದು ಮಾಧ್ಯಮದವರೊಂದಿಗೆ ಮಾತನಾಡಿದರು. ಕಂಪ್ಲಿಯ ಬಾಲಕರ ಪದವಿಪೂರ್ವ ಕಾಲೇಜು ಹಾಗೂ ಬಾಲಕಿಯರ ಪದವಿ ಪೂರ್ವ ಕಾಲೇಜು ಎರಡು ಪರೀಕ್ಷಾ ಕೇಂದ್ರಗಳಾಗಿವೆ ಎಂದು ತಿಳಿಸಿದರು.
ಪರೀಕ್ಷಾ ಕೇಂದ್ರಗಳಿಗೆ ಪೊಲೀಸ್ ಬಿಗಿ ಭದ್ರತೆಯನ್ನು ಏರ್ಪಡಿಸಲಾಗಿತ್ತು ಎಂದು ಮಾಹಿತಿಯನ್ನು ಒದಗಿಸಿದರು.
