
ವಿಜಯನಗರ: ಇಂದು ವಿಜಯನಗರ ಕ್ಷೇತ್ರದ ಮಾನ್ಯ ಶಾಸಕರಾದ ಶ್ರೀ ಹೆಚ್. ಆರ್. ಗವಿಯಪ್ಪ ರವರು, “ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ 2025” ರ ಪ್ರಯುಕ್ತ ಹೊಸಪೇಟೆಯ ಡಾ. ಪುನೀತ್ ರಾಜಕುಮಾರ್ ಜಿಲ್ಲಾ ಕ್ರೀಡಾಂಗಣದಿಂದ ಹಂಪಿಯ ಮಹಾನವಮಿ ದಿಬ್ಬದವರೆಗೆ ಆಯೋಜಿಸಲಾಗಿದ್ದ “ಮಹಿಳಾ ಬೈಕ್ ರ‍್ಯಾಲಿ” ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಬುಲೆಟ್ ಬೈಕ್ ಓಡಿಸಿದ ಮಹಿಳಾ ಸಹೋದರಿ ನೋಡುಗರ ಗಮನ ಸೆಳೆದರು.
ಈ ಸಂದರ್ಭದಲ್ಲಿ ಹುಡಾ’ ಅಧ್ಯಕ್ಷರಾದ ಮೊಹಮ್ಮದ್ ಇಮಾಮ್ ನಿಯಾಜಿ ಸೇರಿದಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು, ಪ್ರಜಾಪಿತ ಬ್ರಹ್ಮಕುಮಾರಿ ಆಶ್ರಮದವರು , ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಮುಖಂಡರುಗಳು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.
ವರದಿ : ಜಿಲಾನ್ ಸಾಬ್ ಬಡಿಗೇರ