
ಬೀದರ್ : ಡೆಲ್ ಟೆಕ್ನೋಲಾಜೀಸ್ ಮತ್ತು ಲರ್ನಿಂಗ್ ಲಿಂಕ್ಸ್ ಫೌಂಡೇಷನ್ ಸಹಯೋಗದಲ್ಲಿ ಶ್ರೀ ಕುಮಾರೇಶ್ವರ ಗುರುಕುಲ ಹೈಯರ್ ಮತ್ತು ಪ್ರಾಥಮಿಕ ಶಾಲೆ, ಬೀದರ್ ನಲ್ಲಿ ಸೈಬರ್ ಸುರಕ್ಷತಾ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ಸೈಬರ್ ಸುರಕ್ಷತೆ, ಆನ್‌ಲೈನ್ ಭದ್ರತೆ ಮತ್ತು ಡಿಜಿಟಲ್ ಜಗತ್ತಿನಲ್ಲಿ ಜಾಗೃತಿಯ ಅಗತ್ಯತೆಯ ಬಗ್ಗೆ ಮಾಹಿತಿ ನೀಡಲಾಯಿತು. ವಿಶೇಷವಾಗಿ ಮಕ್ಕಳನ್ನು ಆನ್‌ಲೈನ್ ಅಪಾಯಗಳಿಂದ ಸುರಕ್ಷಿತವಾಗಿಡಲು ಬೇಕಾದ ಮುನ್ನೆಚ್ಚರಿಕೆ ಕ್ರಮಗಳು, ಬಲವಾದ ಪಾಸ್‌ವರ್ಡ್‌ಗಳ ಮಹತ್ವ, ಫಿಷಿಂಗ್ ಹ್ಯಾಕಿಂಗ್ ತಂತ್ರಗಳನ್ನು ತಪ್ಪಿಸುವ ವಿಧಾನಗಳು ಮತ್ತು ಜಾಗತಿಕ ಸೈಬರ್ ಅಪಾಯಗಳ ಕುರಿತು ಉಪನ್ಯಾಸ ನೀಡಲಾಯಿತು.
ಡೆಲ್ ಟೆಕ್ನೋಲಾಜೀಸ್ ಮತ್ತು ಲರ್ನಿಂಗ್ ಲಿಂಕ್ಸ್ ಫೌಂಡೇಷನ್‌ನ ತಜ್ಞರು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ, ಅವರ ಪ್ರಶ್ನೆಗಳಿಗೆ ಸ್ಪಷ್ಟನೆ ನೀಡಿದರು. ಶಾಲಾ ಆಡಳಿತ ಮಂಡಳಿ ಈ ಕಾರ್ಯಕ್ರಮವನ್ನು ಶ್ಲಾಘಿಸಿ, ಇಂತಹ ಕಾರ್ಯಕ್ರಮಗಳು ಮಕ್ಕಳ ಭವಿಷ್ಯವನ್ನು ಸುರಕ್ಷಿತಗೊಳಿಸಲು ಬಹಳ ಮುಖ್ಯವೆಂದು ಅಭಿಪ್ರಾಯಪಟ್ಟರು.
ಈ ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪೋಷಕರು ಭಾಗವಹಿಸಿದ್ದರು. ಸೈಬರ್ ಜಾಗೃತಿ ಮತ್ತು ಸುರಕ್ಷತಾ ಕ್ರಮಗಳನ್ನು ಪ್ರತಿ ವಿದ್ಯಾರ್ಥಿಯು ಪಾಲಿಸಬೇಕು ಎಂಬ ಸಂದೇಶ ಈ ಕಾರ್ಯಕ್ರಮದ ಮೂಲಕ ಹಂಚಿಕೊಳ್ಳಲಾಯಿತು.
- ಕರುನಾಡ ಕಂದ