ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ವಣ್ಣೂರ ಗ್ರಾಮದಲ್ಲಿ ಶಾಂತಿನಿಕೇತನ ಕನ್ನಡ ಮತ್ತು ಆಂಗ್ಲ ಮಾಧ್ಯಮ ವಸತಿ ಶಾಲೆಯಲ್ಲಿ 18 ನೇ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮ ಜರುಗಿತು.
ಈ ಕಾರ್ಯಕ್ರಮದಲ್ಲಿ ಮುದ್ದು ಮಕ್ಕಳಿಂದ
ಹಲವಾರು ಮನರಂಜನೆ ಕಾರ್ಯಕ್ರಮಗಳು ಜರುಗಿದವು. ಈ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಕಿತ್ತೂರು ಮತ ಕ್ಷೇತ್ರದ ಶಾಸಕರಾದ
ಬಾಬಾಸಾಹೇಬ ಪಾಟೀಲ ಹಂಪಿ ಉತ್ಸವವನ್ನು ಬಿಟ್ಟರೆ ಮತ್ತೆ ನೋಡುವುದಾದರೆ ಅದು ವಣ್ಣೂರ ಉತ್ಸವ ಎಂದರು ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು ವಿದ್ಯಾರ್ಥಿಗಳು ಶಿಸ್ತುಬದ್ಧವಾಗಿ ಓದಬೇಕು
ಶಿಕ್ಷಣದ ಕಡೆ ಹೆಚ್ಚು ಒತ್ತು ನೀಡಬೇಕು ಎಂದು ಮಾತನಾಡಿದರು.
ಈ ಸಂದರ್ಭದಲ್ಲಿ ಕಿತ್ತೂರ ಮತಕ್ಷೇತ್ರ ಶಾಸಕರಾದ ಬಾಬಾಸಾಹೇಬ ಪಾಟೀಲ, ನಿಂಗಪ್ಪ ಅರಕೇರಿ ಮಾಜಿ ಜಿಲ್ಲಾ ಪಂಚಾಯತಿ ಸದಸ್ಯರು, ಮಂಜುಳಾ ಹೊನ್ನ ನಾಯಕ ಪಾಟೀಲ ಗ್ರಾಮ ಪಂಚಾಯತ ಅಧ್ಯಕ್ಷರು,
ಎಸ್ ಆರ್ ಕುಲಕರ್ಣಿ, ಎಸ್ ಬಿ ಸಂಗನಗೌಡರ,
ಆರ್ ಆರ್ ಪಾಟೀಲ, ಸುಭಾಷ್ ರಾಮನಟ್ಟಿ, ಶೇಖರ ಪಾಟೀಲ, ವಣ್ಣೂರ ಗ್ರಾಮದ ಹಾಗೂ ಶಾಂತಿನಿಕೇತನ ಶಾಲೆಯ ಅಧ್ಯಕ್ಷರು ಉಪಾಧ್ಯಕ್ಷರು ಹಾಗೂ ಶಾಲೆಯ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.
- ಕರುನಾಡ ಕಂದ