ಶಿವಮೊಗ್ಗ: ಈ ದಿನ ಪೊಲೀಸ್ ಆಯುಕ್ತರಾದ ಶ್ರೀಮತಿ ಸೀಮಾ ಲಾಟ್ಕರ್, IPS ರವರ ನೇತೃತ್ವದಲ್ಲಿ ಎಲ್ಲಾ ಪ್ರವಾಸಿ ಸ್ಥಳಗಳು, ಹೋಂ ಸ್ಟೇ, ರೆಸಾರ್ಟ್ ಗಳ ಮಾಲೀಕರು ಮತ್ತು ಮುಖ್ಯಸ್ಥರುಗಳ ಸಭೆಯನ್ನು ಪೊಲೀಸ್ ಆಯುಕ್ತರ ಕಚೇರಿಯ ಸಭಾಂಗಣದಲ್ಲಿ ನಡೆಸಲಾಯಿತು.
ಇದೇ ಸಂದರ್ಭದಲ್ಲಿ ಸಭೆಯಲ್ಲಿ ವಿದೇಶಿ ಪ್ರವಾಸಿಗರ ಸುರಕ್ಷತೆ ಮತ್ತು ಭದ್ರತೆಯ ಬಗ್ಗೆ ತೆಗೆದುಕೊಂಡಿರುವ ಸುರಕ್ಷತಾ ಕ್ರಮಗಳ ಬಗ್ಗೆ ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ಸಭೆಯಲ್ಲಿ ಡಿಸಿಪಿ ಶ್ರೀ ಮುತ್ತುರಾಜು ಎಂ. IPS ಕಾನೂನು ಸುವ್ಯವಸ್ಥೆ ರವರು ಮತ್ತಿತರೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ವರದಿ : ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ